ಮುರುಘಾ ಶರಣರಿಗೆ ಜಾಮೀನು: ಸುಪ್ರೀಂಗೆ ಒಡನಾಡಿ ಸಂಸ್ಥೆ ಮೇಲ್ಮನವಿ

Date:

Advertisements

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.

ಮೈಸೂರಿನ ಒಡನಾಡಿ ಸಂಸ್ಥೆಯ ಪರ ವಕೀಲರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್‌ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ, ಪ್ರಕರಣದ ವಿಚಾರಣೆಗೆ ಅಂಗೀಕರಿಸಿತು. ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಪೀಠ, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ವಕೀಲೆ ಅಪರ್ಣಾ ಭಟ್‌ ವಾದಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

Advertisements

ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ದೂರು ದಾಖಲಿಸಿದ್ದರು. 2022ರ ಸೆಪ್ಟೆಂಬರ್ 1ರಂದು ಶರಣರನ್ನು ಬಂಧಿಸಲಾಗಿತ್ತು.

ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಮೊದಲ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪೋಕ್ಸೊ ಪ್ರಕರಣ ಶರಣರ ವಿರುದ್ಧ ದಾಖಲಾಗಿದ್ದು ಇದರಲ್ಲಿ ಶರಣರ ವಿರುದ್ಧ ಬಾಡಿ ವಾರಂಟ್‌ ಹೊರಡಿಸಲಾಗಿತ್ತು. ಶರಣರಿಗೆ ಹೈಕೋರ್ಟ್‌ ಏಕಸದಸ್ಯ ಪೀಠ ನವೆಂಬರ್‌ನಲ್ಲಿ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X