ಪಿಎಸ್ಐ ಮರುಪರೀಕ್ಷೆ: ಕೀ ಉತ್ತರ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ.23ರಂದು ನಡೆಸಿದ ಪಿಎಸ್‌ಐ ಮರು ಪರೀಕ್ಷೆಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿದೆ. ಈ ಸದರಿ ಕೀ ಉತ್ತರಗಳಿಗೆ ಸಂಬಂಧಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಮುಂದಿನ ಫೆಬ್ರವರಿ 5ರ ಸಂಜೆ ಐದು ಗಂಟೆಯೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ಬುಕ್‌ಲೆಟ್‌ ಪ್ರಕಾರ ಕೀ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯ. ಅಲ್ಲದೇ ಪ್ರತಿ ಪ್ರಶ್ನೆಗೆ ನಿಗದಿತ ಶುಲ್ಕ ಪಾವತಿಸಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಾತ್ಕಾಲಿಕ ಸರಿಯುತ್ತರಗಳಿಗೆ ಆಕ್ಷೇಪಣೆ ಸಲ್ಲಿಸುವುದು ಹೇಗೆ?
ಕೆಇಎ ವೆಬ್‌ಸೈಟ್‌ನಲ್ಲಿ ಜ.30 ರಂದು ವೆಬ್‌ಲಿಂಕ್‌ ಒಂದನ್ನು ಆಕ್ಷೇಪಣೆ ಸಲ್ಲಿಸಲು ನೀಡಲಾಗುತ್ತದೆ. ಸದರಿ ಲಿಂಕ್‌ ಕ್ಲಿಕ್ ಮಾಡುವ ಮೂಲಕ ಅಭ್ಯರ್ಥಿಗಳು ತಮ್ಮ ರಿಜಿಸ್ಟ್ರೇಷನ್‌ ನಂಬರ್, ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್ ಆಗಬೇಕು. ನಂತರ ಕೇಳಲಾಗುವ ಮಾಹಿತಿಗಳನ್ನು, ಪೂರಕ ದಾಖಲೆಗಳನ್ನು ನೀಡಿ. ಶುಲ್ಕ ಪಾವತಿಸಿ. ಆಕ್ಷೇಪಣೆ ಸಲ್ಲಿಸಬಹುದು.

ಪ್ರಾಧಿಕಾರವು ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಒಂದು ವಾರದೊಳಗೆ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಿದೆ. ನಂತರ ಮುಂದಿನ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ. ಪತ್ರ, ಇ-ಮೇಲ್ ಮೂಲಕ ಕಳುಹಿಸುವಂತಹ ಆಕ್ಷೇಪಗಳನ್ನು ಪುರಸ್ಕರಿಸುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್‌ ಸಬ್‌‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.

ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ತಾತ್ಕಾಲಿಕ ಸರಿಯುತ್ತರಗಳನ್ನು ಚೆಕ್‌ ಮಾಡಲು ಕೆಳಗಿನ ಡೈರೆಕ್ಟ್‌ ಲಿಂಕ್‌ ಅನ್ನು ಕ್ಲಿಕ್ ಮಾಡಬಹುದು.

https://cetonline.karnataka.gov.in/kea/

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...