ಬೀದರ್‌ | ಔರಾದ ತಹಸೀಲ್ದಾರ್‌ ಕಚೇರಿಯಲ್ಲಿ ಇಲ್ಲ ʼಶುದ್ಧ ಕುಡಿಯುವ ನೀರುʼ

Date:

Advertisements

ಇನ್ನೇನು ಬೇಸಿಗೆಯ ಧಗೆ ಶುರುವಾಗುತ್ತಿದೆ. ದಿನೇ ದಿನೇ ಬಿರು ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ.

ಔರಾದ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ ಗ್ರಾಮೀಣ ಭಾಗದಿಂದ ನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಜನರು ತಮ್ಮ ಅಗತ್ಯ ಕೆಲಸಗಳಿಗಾಗಿ ಬರುತ್ತಾರೆ. ಸದಾ ಜನರಿಂದ ಗಿಜುಗುಡುವ ತಹಸೀಲ್‌ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಇಲ್ಲದಿರುವುದು ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಕಚೇರಿಗೆ ಬಂದ ಸಾರ್ವಜನಿಕರು, ಸಿಬ್ಬಂದಿ ಹೊರಗಡೆ ಅಂಗಡಿಗಳಲ್ಲಿ ಹಣ ಕೊಟ್ಟು ಖರೀದಿಸುವುದು ಮಾಮೂಲಿಯಾಗಿದೆ.

ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿ‌ ಒಂದು ವರ್ಷ ಕಳೆದಿದೆ, ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ಥಿ ಕಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಕಚೇರಿ ಎದುರಿನ ಅಂಗಡಿ, ಮುಂಗಟ್ಟುಗಳಲ್ಲಿ ಹಣ ಕೊಟ್ಟು ನೀರಿನ ಬಾಟಲಿ ಖರೀದಿಸುತ್ತಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Advertisements

“ಔರಾದ ತಹಸೀಲ್‌ ಕಚೇರಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ನಿತ್ಯ ಕಚೇರಿ ಕೆಲಸಗಳಿಗೆ ಹಳ್ಳಿಗಳಿಂದ ನೂರಾರು ಜನ ಮಹಿಳೆಯರು, ವೃದ್ಧರು ಬರುತ್ತಾರೆ. ಅವರಲ್ಲಿ ಕೆಲವರು ದಿನಪೂರ್ತಿ ಅಲ್ಲಿರುತ್ತಾರೆ. ಹೀಗಾಗಿ ವರ್ಷದಿಂದ ಧೂಳು ತಿನ್ನುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಕೂಡಲೇ ದುರಸ್ತಿಗೊಳಿಸಬೇಕು” ಎಂದು ದಸಂಸ ತಾಲೂಕು ಸಂಚಾಲಕ ಈದಿನ.ಕಾಮ್‌ ಜತೆಗೆ ಮಾತನಾಡಿ ಸುಭಾಷ ಲಾಧಾ ಆಗ್ರಹಿಸಿದರು.

ಕರವೇ ತಾಲೂಕು ಅಧ್ಯಕ್ಷ ಅನೀಲ ದೇವಕತ್ತೆ ಈದಿನ.ಕಾಮ್‌ ಜತೆಗೆ ಮಾತನಾಡಿ, “ಗ್ರಾಮೀಣ ಭಾಗದಿಂದ ತಹಸೀಲ್ದಾರ್ ಕಚೇರಿ ಕೆಲಸಗಳಿಗಾಗಿ‌ ಆಗಮಿಸುವ ನೂರಾರು ಜನರಿಗೆ ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಬೇಸಿಗೆ ಶುರುವಾಗುವ ಮುನ್ನವೇ ಸಾರ್ವಜನಿಕರಿಗೆ ಕಚೇರಿ ಆವರಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಕುರಿತು ಔರಾದ ತಾಲೂಕು ತಹಸೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ ಈದಿನ.ಕಾಮ್‌ ಜತೆಗೆ ಮಾತನಾಡಿ, “ಕೆಲವು ತಿಂಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದೆ. ಹೀಗಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಶೀಘ್ರದಲ್ಲೇ ದುರಸ್ತಿ ಮಾಡಿ ನೀರಿನ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X