ವಿಎಚ್‌ಪಿ-ಬಿಜೆಪಿ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ

Date:

Advertisements

ಛತ್ತೀಸ್‌ಗಢದ ಕೋಮುಗಲಭೆ ನಂತರ ಏಪ್ರಿಲ್ 10ರಂದು ಬಿಜೆಪಿ ಮತ್ತು ವಿಎಚ್‌ಪಿ ನೇತೃತ್ವದ ನಡೆದ ಅಲ್ಪಸಂಖ್ಯಾತ ವಿರೋಧಿ ಕಾರ್ಯಕ್ರಮದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ.

ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೋಮು ಗಲಭೆ ನಡೆದ ಬಳಿಕ ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಸದಸ್ಯರು  ಸಭೆ ನಡೆಸಿ ಮುಸ್ಲಿಮರು, ಕ್ರಿಶ್ಚಿಯನ್ ಸೇರಿದ ಅಲ್ಪಸಂಖ್ಯಾತ ಸಮುದಾಯವನ್ನು ಆರ್ಥಿಕವಾಗಿ ಬಹಿಷ್ಕರಿಸಲು ಸೂಚಿಸಿರುವುದಾಗಿ ವರದಿಯಾಗಿದೆ.

ರಾಜ್ಯದ ಬಮೆತರ ಜಿಲ್ಲೆಯಲ್ಲಿ ಏಪ್ರಿಲ್ 8ರಂದು ನಡೆದ ಕೋಮು ಗಲಭೆಗೆ ಒಬ್ಬ ವ್ಯಕ್ತಿ ಮೃತಪಟ್ಟು ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಈ ಗಲಭೆಯ ನಂತರ ಹಿಂದುತ್ವ ಸಂಘಟನೆಗಳಾದ ಬಿಜೆಪಿ ಮತ್ತು ವಿಎಚ್‌ಪಿ ಏಪ್ರಿಲ್ 10ರಂದು ಸಭೆ ನಡೆಸಿ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಆರ್ಥಿಕ ವ್ಯವಹಾರಗಳನ್ನು ಮಾಡದಂತೆ ಬಹಿಷ್ಕರಿಸುವ ತೀರ್ಮಾನ ಕೈಗೊಂಡಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisements

ಏಪ್ರಿಲ್ 8ರಂದು ಭಿನ್ನ ಸಮುದಾಯದ ಇಬ್ಬರು ಶಾಲಾ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಮೇಲೆ ಎರಡು ಸಮುದಾಯಗಳ ನಡುವೆ ಕೋಮು ಗಲಭೆ ಸೃಷ್ಟಿಯಾಗಿತ್ತು. 23 ವರ್ಷದ ದಿನಗೂಲಿ ಕಾರ್ಮಿಕ ಭುವನೇಶ್ವರ ಸಾಹು ಕೋಮು ಹಿಂಸೆಗೆ ಬಲಿಯಾಗಿದ್ದರು. ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ?: ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಏಪ್ರಿಲ್ 10ರಂದು ವಿಎಚ್‌ಪಿ ಮತ್ತು ಹಿಂದುತ್ವ ಸಂಘಟನೆ ಬಜರಂಗ ದಳ ಬೆಂಬಲಿತ ಬಿಜೆಪಿ ಸದಸ್ಯರು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹರಡಿರುವ ವೈರಲ್ ವಿಡಿಯೋ ಒಂದರಲ್ಲಿ, ವಿಎಚ್‌ಪಿ ಸದಸ್ಯರೊಬ್ಬರು “ಎಲ್ಲಾ ಹಿಂದುಗಳು ತಮ್ಮ ಅಂಗಡಿಗಳಲ್ಲಿ ಮತ್ತು ಉದ್ಯಮಗಳಲ್ಲಿ ತಾವು ಹಿಂದೂ ಸಮುದಾಯದವರು ಎನ್ನುವ ಸೂಚನೆ ಹಾಕಿಕೊಳ್ಳಿ” ಎಂದು ಆದೇಶಿಸಿರುವುದು ಕಂಡುಬಂದಿದೆ.

ಆ ಸಂದರ್ಭದಲ್ಲಿ ಮಾಜಿ ಬಿಜೆಪಿ ಸಂಸದ ಬಸ್ತಾರ್ ದಿನೇಶ್ ಕಶ್ಯಪ್ ಮತ್ತು ರಾಜಕಾರಣಿ ಕಮಲ್ ಚಂದ್ರ ಭಂಜ್ದೆವಿ ಅವರೂ ಸ್ಥಳದಲ್ಲಿ ಹಾಜರಿದ್ದರು.

ವಿಡಿಯೋ ಪರಿಶೀಲಿಸಿ ಸ್ಥಳದಲ್ಲಿದ್ದ ಕೆಲವರೊಂದಿಗೆ ಮಾತನಾಡಿದ್ದೇವೆ. ಧರ್ಮ ಆಧಾರಿತ ವಿಭಜನೆ ಪ್ರಯತ್ನದ ಪ್ರಾಥಮಿಕ ಪ್ರಕರಣ ದಾಖಲಾಗಿದೆ ಎಂದು ಬಸ್ತಾರ್ ವಲಯದ ಐಜಿಪಿ ಹೇಳಿದ್ದಾರೆ.

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ 11 ಮಂದಿಯನ್ನು ಕೋಮು ಗಲಭೆಯಾದ ವಾರದೊಳಗೆ ಬಂಧಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X