ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗದ ಅಧಿಕಾರಿಗಳಿಗೆ ನಮ್ಮ ಸರ್ಕಾರದಲ್ಲಿ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

Advertisements

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲೇ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು.

“ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಕಮಿಟ್ ಮೆಂಟ್ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ. ಅವಕಾಶವೂ ಇಲ್ಲ. ನಿಮ್ಮ ಲೆವೆಲ್ ನಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು” ಎಂದರು.

Advertisements

“ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ” ಎಂದು ಹೇಳಿದರು.

“ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ಕಡ್ಡಾಯ | ಸರ್ಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

“ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ” ಎನ್ನುವ ಸೂಚನೆ ನೀಡಿದರು.

ಸಾರ್ವಜನಿಕರು ರೆವಿನ್ಯೂ ಇಲಾಖೆ, ತಹಶೀಲ್ದಾರ್ ಮತ್ತು, AC ಹಾಗೂ DC ಕಚೇರಿಗಳಿಗೆ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, AC, DC ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ” ಎಂದರು.

“ಕೋಲಾರದ ಹಾಸ್ಟೆಲ್‌ನ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರುಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X