ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಅವರು ಶರದ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಯಾಗಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಚಿವ ಆರ್. ಶಂಕರ್, ಶುಕ್ರವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ಸಿಪಿ)ಕ್ಕೆ ಸೇರ್ಪಡೆಯಾದರು.
ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್ಗೆ ಟಿಕೆಟ್ ದೊರೆತ ಹಿನ್ನೆಲೆ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.