ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ನಲ್ಲಿ ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ 371ಜೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ಗೆಜೆಟ್ ಹೊರಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಬಸವರಾಜ ಧರ್ಮಂತಿ ಒತ್ತಾಯಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮುಳುಗಡೆ ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ಸಂಪೂರ್ಣ ಶೈಕ್ಷಣಿಕ ಮೀಸಲಾತಿ ಒದಗಿಸಬೇಕು. ಐತಿಹಾಸಿಕ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಮೇಣಬಸದಿ ಗುಹಾಂತರ ದೇವಾಲಯಗಳು, ವಿಶ್ವಗುರು ಬಸವಣ್ಣನವರ ಐಕ್ಯ ಭೂಮಿ ಕೂಡಲ ಸಂಗಮ, ವೀರ ಸಿಂಧೂರ ಲಕ್ಷ್ಮಣ, ಜಿಡಗಣ್ಣ, ಬಾಲಣ್ಣರಂತಹ ಸ್ವಾತಂತ್ರ್ಯ ಸೇನಾನಿಗಳ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕಾರಿಡಾರ್ ನಿರ್ಮಾಣ ಮಾಡಲು ವಿಶೇಷ ಪ್ಯಾಕೇಜ್ ನೀಡಬೇಕು. ಕುಡಚಿ – ರಾಯಚೂರು ರೈಲು ಮಾರ್ಗ ನಿರ್ಮಾಣಕ್ಕೆ ಸೂಕ್ತ ಅನುದಾನ ಮಂಜೂರು ಮಾಡಬೇಕು” ಎಂದು ಆಗ್ರಹಿದರು.