ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

Date:

Advertisements

ಧಾರವಾಡ ನಗರದ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕ.ಶಿ. ಜಿಗಳೂರು ಕಲಾ ಹಾಗೂ ಡಾ. ಸು.ಮು.ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ. ಅಡಿಯಲ್ಲಿ 2023-2024ನೇ ಸಾಲಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನ ಕೋಶದ ಪ್ರಸಕ್ತ ಸಾಲಿನ ವಿವಿಧ ಕಾರ್ಯಾಗಾರಗಳನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಉದ್ಘಾಟನೆ ಮಾಡಿದರು.

ಅಲ್ಲದೆ, ಲಲಿತಾ ಬ. ಗೊಬ್ಬರಗುಂಪಿ ಕಲಾ ಮತ್ತು ಎಸ್. ವ್ಹಿ. ಬುಡಪನಹಳ್ಳಿ ವಾಣಿಜ್ಯ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿದ್ದ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಇಂದಿನ ಯುವಜನಾಂಗ ಆರೋಗ್ಯಕರವಾದ ದೇಹ ಮತ್ತು ಮನಸ್ಸನ್ನು ಕಾಯ್ದುಕೊಳ್ಳಬೇಕು, ಅಂಬೇಡ್ಕರರವರ ಆದರ್ಶ ಜೀವನ, ಸಮಾನತೆಯ ಬದುಕು ಅವರ ಸಾಧನೆ ಕುರಿತು ಹೇಳುತ್ತಾ ಅವರು ಶಿಕ್ಷಣವು ಇಡೀ ಜಗತ್ತನ್ನು ಬದಲಾಯಿಸಬಹುದು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

Advertisements

ನಮ್ಮ ಭವಿಷ್ಯವನ್ನು ಸಾಧನೆಯತ್ತ ಒಯ್ಯಲು ಸತತ ಪರಿಶ್ರಮ ನಿರಂತರ ಅಭ್ಯಾಸ ಮಾಡಬೇಕು. ಇಂತಹ ವಿದ್ಯಾಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ನಿಮ್ಮಂತಹ ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶ ಇಂತಹ ಅವಕಾಶವನ್ನು ಬಳಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಾ ವಿದ್ಯಾರ್ಥಿಗಳ ಮನ ಗೆದ್ದರು. ನಮ್ಮ ಮಾತು ಕೃತಿ, ಚಿಂತನೆಗಳಲ್ಲಿ ಸತ್ಯ, ನಿಷ್ಠೆ, ನಮ್ಮ ಕುಟುಂಬ, ಸಮಾಜದ ಜೊತೆಗೆ ನಾಯಕತ್ವದ ಮನೋವೃತ್ತಿ ಬೆಳೆಸಿಕೊಳ್ಳಬೇಕೆಂದರು.

ಈ ಸಮಾರಂಭದ ಘನ ಅಧ್ಯಕ್ಷತೆ ವಹಿಸಿದ್ದ ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ, ಗೌರವ ಕಾರ್ಯದರ್ಶಿ ಎಂ. ಸಿ. ಬಂಡಿ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಧೈರ್ಯಶಾಲಿಗಳಾಗಿ ಶೈಕ್ಷಣಿಕ ಬೆಳವಣಿಗೆಯೊಂದಿಗೆ ಉತ್ತಮ ಗುಣ, ಚಾರಿತ್ರ್ಯ ನಿರ್ಮಾಣದೆಡೆಗೆ ಗಮನ ಹರಿಸಬೇಕು. ಕಲಿತ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತರಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾದ ಶಕುಂತಲಾ ಬಿರಾದಾರ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವಂದಿಸಿದರು. ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನ ಕೋಶಗಳ ಸಂಚಾಲಕರಾದ ಡಾ. ಅಶ್ವಿನಿ ಎಸ್. ಪಾಟೀಲ ಮತ್ತು ಕನ್ನಡ ಉಪನ್ಯಾಸಕರಾದ ಶ್ರೀ ಮಂಜುನಾಥ ಹೊನ್ನಕ್ಕಳವರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಬಿ. ಎನ್. ಪಾಟೀಲ. ಕೋಶಾಧ್ಯಕ್ಷರು ಆರ್.ಎ. ಉಚ್ಚಿಲ, ಸದಸ್ಯರುಗಳಾದ ಡಾ. ಸಿ. ಎಸ್. ಪಾಟೀಲ, ಡಾ. ನಿರ್ಮಲಾ ಎಂ. ಹಿರೇಗೌಡರ, ಡಾ. ಜೆ. ಎಮ್. ನಾಗಯ್ಯ, ಡಾ. ವೀರೇಶ ಕಟ್ಟಿಮಠ, ಆಡಳಿತಾಧಿಕಾರಿಗಳಾದ ಎಸ್. ಕೆ. ಹೊಸಂಗಡಿ, ಎನ್.ಎಸ್.ಎಸ್. ಘಟಕ-1 ಮತ್ತು 2ರ ಕಾರ್ಯಕ್ರಮದ ಅಧಿಕಾರಿಗಳಾದ ಡಾ. ಅನಿತಾ ಕಡಪಟ್ಟಿ ಮತ್ತು ಡಾ. ಅಶ್ವಿನಿ ಪಾಟೀಲ, ಡಾ. ದತ್ತಾ ಕಾಮಕರ ಹಾಗೂ ಎಲ್ಲ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X