ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಮಾಡುವ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸುವ ಮುಂಚಿತವಾಗಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಹೇಳಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷ ಹಾಗೂ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಮುದ್ರಕರ ಸಂಘ ಮುಖಂಡರ ಸಭೆಯಲ್ಲಿ ಸೂಚಿಸಿದರು.
“ರಾಜಕೀಯ ಪಕ್ಷಗಳು ಹಾಗೂ ಮುದ್ರಕರು ಕರಪತ್ರ, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು. ಅರ್ಜಿಯಲ್ಲಿ ಮುದ್ರಕರ ಹೆಸರು ಇತ್ಯಾದಿಗಳನ್ನು ಕಡ್ಡಾಯವಾಗಿ ರಾಜಕೀಯ ಪಕ್ಷಗಳು ಮುದ್ರಿಸಬೇಕು. ಪ್ರತಿದಿನ ಮುದ್ರಣದ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು” ಎಂದರು.
ಕರಪತ್ರ ಮತ್ತು ಇತರೆ ಮುದ್ರಣದ ಬಳಿಕ ಅದರ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿಯೊಂದಿಗೆ ಸಲ್ಲಿಸಬೇಕು. ರಾಜಕೀಯ ಪ್ರೇರಿತ ಯಾವುದೇ ಮುದ್ರಣ ಕಾರ್ಯವನ್ನು ಕೈಗೊಳ್ಳುವ ಸಂದರ್ಭದಲ್ಲಿ ನಿಗದಿತ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ (1951) 127(ಎ) ಅಡಿ 6 ತಿಂಗಳ ಶಿಕ್ಷೆ, 2,000 ದಂಡ ಹಾಗೂ ಲೈಸೆನ್ಸ್ ರದ್ದು ಮಾಡಲಾಗುತ್ತದೆ” ಎಂದು ತಿಳಿಸಿದರು.
ಮುದ್ರಣದ ಮಾಹಿತಿಯನ್ನು ಅರ್ಜಿ ಪಡೆದು ನಮೂದಿಸಬೇಕು. ಇದರಲ್ಲಿ ಮುದ್ರಕರ ಹೆಸರು, ಅಭ್ಯರ್ಥಿ ವಿವರ, ವೆಚ್ಚ, ವಿಳಾಸ, ಪ್ರತಿಗಳ ಸಂಖ್ಯೆ ಇತ್ಯಾದಿ ವಿವರಗಳನ್ನು ನೀಡಬೇಕು ಸಮರ್ಪಕ ಮಾಹಿತಿ ಲಭ್ಯವಿಲ್ಲದಿದ್ದರೆ ಮುದ್ರಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ತಿಳಿಸಿದರು.
“ಕೋಮುಭಾವನೆ, ಪ್ರಚೋದನೆಯಂತಹ ಪೋಸ್ಟರ್, ಕರಪತ್ರ, ಬ್ಯಾನರ್‌ಗಳನ್ನು ಮುದ್ರಿಸುವಂತಿಲ್ಲ, ಒಂದು ವೇಳೆ ಹಾಗೆ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಉಲ್ಲಂಘನೆಯಾಗುತ್ತದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳು ₹95 ಲಕ್ಷದವರೆಗೆ ಮಾತ್ರ ಖರ್ಚು ಮಾಡಬೇಕು. ಪ್ರಚಾರದ ಪ್ರತಿ ಮಾಹಿತಿ ಸಲ್ಲಿಸಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಕುರಿತ ವಿಚಾರ ಸಂಕಿರಣ
ಈ ಸಂದರ್ಭದಲ್ಲಿ ಸಿಪಿಐ(ಎಂ) ಪಕ್ಷದ ಮುಖಂಡ ಕೆ ಜಿ ವೀರೇಶ, ಜೆಡಿಎಸ್ ಪಕ್ಷದ ಕಾರ್ಯದರ್ಶಿ ರವಿ ಕುಮಾರ, ಬಿಜೆಪಿ ಕಾರ್ಯದರ್ಶಿ ತಿರುಮಲ ರೆಡ್ಡಿ, ಶಂಕರ್ ಕುಲಕರ್ಣಿ, ಅಮ್ ಆದ್ಮಿ ಪಕ್ಷದ ಮುಖಂಡರು ಸೇರಿದಂತೆ ಇತರರು ಇದ್ದರು.
ವರದಿ : ಹಫೀಜುಲ್ಲ