- ಮಹಾರಾಷ್ಟ್ರ ರಾಯ್‌ಗಢದ ಖೋಪೋಲಿಯಲ್ಲಿ ಅವಘಡ
- ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 41 ಪ್ರಯಾಣಿಕರು
ಮಹಾರಾಷ್ಟ್ರ ರಾಜ್ಯದ ರಾಯ್‌ಗಢ ಜಿಲ್ಲೆಯ ಖೋಪೋಲಿಯ ಬೋಘಾಟ್ ಪ್ರದೇಶದಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 13 ಮಂದಿ ಮೃತಪಟ್ಟಿರುವ ಘಟನೆ ಶನಿವಾರ (ಏಪ್ರಿಲ್ 15) ನಸುಕಿನ ಜಾವ ನಡೆದಿದೆ.
ಘಟನೆಯಲ್ಲಿ ಸುಮಾರು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪುಣೆಯ ಪಿಂಪಲ್ ಗುರವ್‌ನಿಂದ ಮುಂಬೈ ಗೋರೆಗಾಂವ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.
ಪುಣೆ-ರಾಯಗಢ ಗಡಿ ಭಾಗದ ಬೋರ್ಘಾಟ್‌ನಲ್ಲಿ ಮುಂಜಾನೆ 4.30ಕ್ಕೆ ಅಪಘಾತ ಸಂಭವಿಸಿದೆ. ರಸ್ತೆಯಿಂದ ಕಂದಕಕ್ಕೆ ಉರುಳಿದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ಪ್ರಯಾಣಿಕರ ಒಯ್ಯುತ್ತಿದ್ದ ಚೀಲಗಳು ಸೇರಿದಂತೆ ಇತರೆ ವಸ್ತುಗಳು ಚೆಲ್ಲಾ ಪಿಲ್ಲಿಯಾಗಿ ಬಿದ್ದಿವೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಬೇಕು: ಡಿ ರಾಜಾ
“ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ಮಹಾರಾಷ್ಟ್ರ ರಾಯ್‌ಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೋಮನಾಥ್ ಜಾರ್ಜ್ ತಿಳಿಸಿದರು.
ಅಪಘಾತ ನಡೆದ ಸ್ಥಳಕ್ಕೆ ಆಂಬುಲೆನ್ಸ್‌ಗಳು ಮತ್ತು ಪೊಲೀಸ್ ವಾಹನಗಳು ಧಾವಿಸಿ ಗಾಯಾಳುಗಳಿಗೆ ನೆರವಾಗಿವೆ.