ತುಮಕೂರು | ಕೊಬ್ಬರಿ ಖರೀದಿ ಮುಂದೂಡಿಕೆ; ಕಾರಣ ನೀಡದ ಮಾರಾಟ ಮಹಾಮಂಡಳಿ

Date:

Advertisements

ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಯನ್ನು ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಅದಕ್ಕೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಯಾವುದೇ ಕಾರಣ ನೀಡಿಲ್ಲ.

ಫೆಬ್ರವರಿ 1ರಿಂದ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ನಿರ್ಧರಿಸಲಾಗಿತ್ತು. ಇದಕ್ಕೂ ಮುನ್ನ ಜನವರಿ 20ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಈಗ ಎರಡನೇ ಬಾರಿಗೆ ಮುಂದೂಡಿದ್ದು, ಕೊಬ್ಬರಿ ಬೆಳೆಗಾರರನ್ನು ಆತಂಕಕ್ಕೆ ದೂಡಿದೆ.

“ಮಧ್ಯವರ್ತಿಗಳು, ವರ್ತಕರ ಹಾವಳಿ ತಪ್ಪಿಸುವ ಸಲುವಾಗಿ ತೆಂಗು ಬೆಳೆಯುವ ರೈತರಿಂದ ಬಯೋ ಮೆಟ್ರಿಕ್ ಪಡೆದು ಕೊಬ್ಬರಿ ಖರೀದಿಸಲು ನಿರ್ಧರಿಸಲಾಗಿತ್ತು. ಅದಕ್ಕಾಗಿ ತಂತ್ರಾಂಶ ಅಭಿವೃದ್ಧಿಪಡಿಸುವ ಪ್ರಯತ್ನ ನಡೆದಿತ್ತು. ಆದರೆ ಈವರೆಗೂ ಆ ಕೆಲಸ ಪೂರ್ಣಗೊಂಡಿಲ್ಲ. ಹಾಗಾಗಿ ಖರೀದಿ ಮತ್ತಷ್ಟು ತಡವಾಗಬಹುದು” ಎಂಬ ಮಾತುಗಳು ಕೇಳಿಬಂದಿವೆ.

“ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಜನವರಿ 24ರಂದು ತುಮಕೂರು ನಗರದ ಎಪಿಎಂಸಿ ಪ್ರಾಂಗಣದಲ್ಲಿ ತರಾತುರಿಯಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಫೆಬ್ರವರಿ 1ರಿಂದ ಕೊಬ್ಬರಿ ಖರೀದಿ ಆರಂಭವಾಗಲಿದೆ. ಮತ್ತೆ ಮುಂದೂಡುವುದಿಲ್ಲವೆಂದು ರೈತರಿಗೆ ಭರವಸೆ ನೀಡಿದ್ದರು. ಆದರೂ ಖರೀದಿ ಪ್ರಕ್ರಿಯೆ ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ” ಎಂಬುದು ರೈತರ ಆರೋಪವಾಗಿದೆ.

“ಮುಂದಿನ ಖರೀದಿ ದಿನಾಂಕ ನೀಡದೆ ತಾತ್ಕಾಲಿಕವಾಗಿ ಮುಂದೂಡಲಾಗಿದೆಯೆಂದು ಮಹಾಮಂಡಳದ ಅಧಿಕಾರಿಗಳು ಹೇಳುತ್ತಿದ್ದಾರೆ. ದಿನಾಂಕ ನೀಡದೆ ಮುಂದೂಡಿರುವುದನ್ನು ಗಮನಿಸಿದರೆ ಇನ್ನೂ ಎಷ್ಟು ದಿನಗಳು ಬೇಕಾಗುತ್ತದೆ. ಅಲ್ಲಿಯವರೆಗೂ ರೈತರು ಏನು ಮಾಡಬೇಕು. ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ತಡ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.‌

ಈ ಸುದ್ದಿ ಓದಿದ್ದೀರಾ? ಮಂಡ್ಯ ಜನರಿಗೆ ಫೆ.9ರ ಬಂದ್‌ ಬೇಕಿಲ್ಲ: ಸಚಿವ ಚಲುವರಾಯಸ್ವಾಮಿ

“ತಂತ್ರಾಂಶ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಹಿಂದಿನಂತೆ ಬಯೋ ಮೆಟ್ರಿಕ್ ಇಲ್ಲದೆ ಖರೀದಿ ಮಾಡಿ ರೈತರನ್ನು ವಂಚಿಸಲು ಮತ್ತೊಂದು ಸೂತ್ರ ರೂಪಿಸಿದಂತೆ ಕಾಣುತ್ತದೆ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X