ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಎಂಬಾತನನ್ನು ಗುಬ್ಬಿ ಠಾಣೆಯ ಎಸ್‌ಪಿ ದೇವಿಕಾ ದೇವಿ ಅವರು ಬಂಧಿಸಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.
ಠಾಣೆಯ ಲಾಪಕ್‌ನಲ್ಲಿ ಇರಿಸಲಾಗಿದ್ದ ಆರೋಪಿ, ಗುರುವಾರ ರಾತ್ರಿ ಪೊಲೀಸರ ಕಣ್ತಪ್ಪಿಸಿ, ಠಾಣೆಯಿಂದ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿದ್ದ. ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ. ಹಲವಾರು ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ.