ಸಂವಿಧಾನ ದಿನಾಚರಣೆಯ ಪ್ರಯುಕ್ತ ಧಾರವಾಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಗದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ‘ಸಂವಿಧಾನ ಜಾಗೃತಿ ಜಾಥಾ’ವನ್ನು ಉದ್ಘಾಟಿಸಿ ಚಾಲನೆ ನೀಡಿದರು.
ಸಂವಿಧಾನ ಜಾಥಾವನ್ನು ಜನವರಿ 26ರಿಂದ 31ರವರೆಗೆ 31 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಗೊಳಿಸಿದ್ದು, ಫೆಬ್ರವರಿ 2ರಂದು ಹಳ್ಳಿಗೇರಿ, ನಿಗದಿ, ಮನಗುಂಡಿ, ಮನಸೂರ ಹಾಗೂ ಯರಿಕೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಧಾರವಾಡದ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಎಂ ಬಿ ಸಣ್ಣೇರ ಇವರ ಉಪಸ್ಥಿತಿಯಲ್ಲಿ ಹಲವಾರು ಕಲಾ ತಂಡಗಳು, ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಎಲ್ಲ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಡು ಪ್ರಭಾತಪೇರಿಯ ಮೂಲಕ ಗ್ರಾಮದ ಎಲ್ಲ ಬೀದಿ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸುವಿಕೆ, ಸಂವಿಧಾನದ ಮಹತ್ವದ ಕುರಿತು ಉಪನ್ಯಾಸಕರಿಂದ ಉಪನ್ಯಾಸ, ಬೀದಿ ನಾಟಕಗಳ ಮೂಲಕ ಸಾಮಾಜಿಕ ಅರಿವು ಮೂಡಿಸುವ ಹಾಗೂ ಶಾಲಾ ವಿದ್ಯಾರ್ಥಿಗಳ ಹಲವಾರು ಸಂವಿಧಾನದ ಬಗ್ಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರು ದ್ವಿಚಕ್ರ ವಾಹನ ಜಾಥಾ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸ್ವಂತ ಹಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಿದ ಮುಸ್ಲಿಂ ಮಹಿಳೆ
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತ್ರಿವರ್ಣಧ್ವಜದ ಬಣ್ಣಗಳ ಬಲೂನಗಳನ್ನು ಹಾರಿಸುವುದರೊಂದಿಗೆ ನಿಗದಿ ಗ್ರಾಮದಿಂದ ಜಾಗೃತಿ ಜಾಥಾವನ್ನು ಮುಂದಿನ ಗ್ರಾಮಕ್ಕೆ ಬೀಳ್ಕೊಟ್ಟರು.
ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಾ, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿರುತ್ತಾರೆ.