ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಆಗಿರುವ ಅನ್ಯಾಯದ ಬಗ್ಗೆ ಟೀಕಿಸುತ್ತಾ, ಇಂತಹ ನಡೆ ಮುಂದುವರಿದಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಡಿ ಕೆ ಸುರೇಶ್ ಹೇಳಿಕೆಗೆ ಪ್ರತಿಭಟಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅರಮನೆ ಮೈದಾನದಿಂದ ಧಿಕ್ಕಾರ ಕೂಗುತ್ತಾ ಸುರೇಶ್ ಅವರ ಮನೆಯ ಬೀದಿಗೆ ನುಗ್ಗಿದರು. ಪ್ರತಿಭಟನಾಕಾರರು ಸುರೇಶ್ ಅವರ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಗಟ್ಟಿದರು. ಬಿಜೆಪಿ ಯುವ ಮುಖಂಡರಾದ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ವಿಚಾರವಾಗಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಮತ್ತೊಂದು ಕಾರ್ಯಕರ್ತರ ತಂಡ ಗಾಯತ್ರಿ ವಿಹಾರ ಅರಮನೆ ಮೈದಾನ ಗೇಟ್ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿ ಸಾರಿಗೆ ಜಂಜಡ ಉಂಟಾಗಿತ್ತು.
ಏನಿದು ಹೇಳಿಕೆ?
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆ ಬಳಿಕ ಸಂಸದ ಡಿ ಕೆ ಸುರೇಶ್ ಅವರು ನವದೆಹಲಿಯಲ್ಲಿ ಮಾಧ್ಯಮಗಳಿಗೆ, “ದಕ್ಷಿಣ ಭಾರತಕ್ಕೆ ಪ್ರತಿ ಹಂತದಲ್ಲೂ ಅನ್ಯಾಯ ಆಗುತ್ತಿದೆ. ಇದನ್ನು ನಾವು ಮುಂದಿನ ದಿನಗಳಲ್ಲಿ ಖಂಡಿಸದಿದ್ದರೆ, ಪ್ರತ್ಯೇಕ ರಾಷ್ಟ್ರಕ್ಕೂ ಕೂಡ ಬೇಡಿಕೆ ಇಡಬೇಕಾದ ಅನಿವಾರ್ಯ ಪರಿಸ್ಥಿತಿ ನಮ್ಮ ಮೇಲೆ ಹೇರಿಕೆಯಾಗುತ್ತಿದೆ” ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ಕುಸಿದ ಅಂತರ್ಜಲ | ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ
ಡಿ ಕೆಸುರೇಶ್ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸಂಸತ್ತಿನಲ್ಲೂ ವಿರೋಧ ವ್ಯಕ್ತಪಡಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ಮುಖಂಡರು ಅನುದಾನದ ಪಾಲಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾಕ್ಷ್ಯಗಳನ್ನು ನೀಡುತ್ತಿದ್ದಾರೆ.
Out ₹12,19,782 Cr
Uttar Pradesh : 2,18,816 Cr
Bihar: 1,22,685 Cr
Madhya Pradesh: 95,752 Cr
Maharashtra: 77,053Cr
———
Karnataka only gets 44,485 Cr, despite being one of the biggest contributors to the country’s economy.BJP has 27 MPs from the State and not a single one of… pic.twitter.com/4kengU42lB
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 4, 2024