ದ್ವಿತೀಯ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ಗೆ 399 ರನ್ ಗುರಿ ನೀಡಿದ ಭಾರತ: ಆಂಗ್ಲರಿಗೆ ಆರಂಭಿಕ ಆಘಾತ

Date:

Advertisements

ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಕ್ರಿಕೆಟ್ ಅಂತಿಮ ಹಂತಕ್ಕೆ ಬರುತ್ತಿದ್ದು, ಆಂಗ್ಲ ಪಡೆಗೆ ಟೀಂ ಇಂಡಿಯಾ ಗೆಲ್ಲಲು 399 ರನ್‌ ಗುರಿ ನೀಡಿದೆ. ಎರಡನೇ ಇನಿಂಗ್ಸ್‌ ಆರಂಭಿಸಿರುವ ಬೆನ್‌ ಸ್ಟೋಕ್ಸ್‌ ಪಡೆ 67 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೊಳಗಾಗಿದೆ.

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಇಂದು ಟೀಂ ಇಂಡಿಯಾ ಶುಭ್‌ಮನ್‌ ಗಿಲ್ ಅವರ ಆಕರ್ಷಕ ಶತಕದ ನೆರವಿನಿಂದ ತನ್ನ ಎರಡನೇ ಇನಿಂಗ್ಸ್‌ನಲ್ಲಿ 78.3 ಓವರ್‌ಗಳಿಗೆ 255 ರನ್‌ಗಳಿಗೆ ಆಲೌಟ್‌ ಆಗಿ 398 ರನ್‌ ಮುನ್ನಡೆ ಪಡೆಯಿತು.

147 ಚೆಂಡುಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳೊಂದಿಗೆ 104 ರನ್‌ ಬಾರಿಸಿದ ಶುಭಮನ್‌ ಗಿಲ್ ಟೆಸ್ಟ್‌ ವೃತ್ತಿ ಜೀವನದ ಮೂರನೇ ಶತಕ ಪೂರೈಸಿದರು. ಅಕ್ಸರ್‌ ಪಟೇಲ್ (45), ಶ್ರೇಯಸ್ ಅಯ್ಯರ್ (29), ಆರ್‌ ಅಶ್ವಿನ್ (29) ಹೊರತುಪಡಿಸಿದರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 77/4, ರೆಹಾನ್ ಅಹಮದ್ 88/3, ಜೇಮ್ಸ್ ಆಂಡರ್‌ಸನ್ 29/2, ಬಶೀರ್ 58/1 ವಿಕೆಟ್ ಗಳಿಸಿ ಭಾರತದ ಪತನಕ್ಕೆ ಕಾರಣರಾದರು.

ಟೀಂ ಇಂಡಿಯಾದ 399 ಗುರಿಯನ್ನು ಬೆನ್ನಟ್ಟಿರುವ ಇಂಗ್ಲೆಂಡ್‌ ತಂಡ ಆರಂಭಿಕ ಆಘಾತ ಅನುಭವಿಸಿದೆ. 28 ರನ್‌ ಗಳಿಸಿದ್ದ ಬೆನ್ ಡಕೆಟ್ 11 ಓವರ್‌ನಲ್ಲಿ ಸ್ಪಿನ್ನರ್ ಆರ್ ಅಶ್ವಿನ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಶ್ರೀಕರ್ ಭರತ್‌ಗೆ ಕ್ಯಾಚಿತ್ತು ಔಟಾದರು.

ದಿನದಾಂತ್ಯಕ್ಕೆ ಆಂಗ್ಲ ಪಡೆ ಆರಂಭಿಕ ಆಟಗಾರ ಜಾಕ್ ಕ್ರಾಲಿ(29), ರೆಹಾನ್ ಅಹಮದ್ (9) ಅವರ ಬ್ಯಾಟಿಂಗ್‌ನೊಂದಿಗೆ 14 ಓವರ್‌ಗಳಲ್ಲಿ 67/1 ರನ್‌ ಗಳಿಸಿದೆ ಆಡವಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

Download Eedina App Android / iOS

X