ಕೋಲಾರ | ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್‌ ಮುಖಂಡ ವಿ ಆರ್‌ ಸುದರ್ಶನ್ ವಿದಾಯ

Date:

Advertisements
  • ಕೋಲಾರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು
  • ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ

ವಿಧಾನ ಪರಿಷತ್ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್‌ ಮುಖಂಡ ವಿ ಆರ್ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

ಕೋಲಾರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡು ಈಗ ಕಾರಣಾಂತರಗಳಿಂದ ದೂರ ಉಳಿಯುವ ನಿರ್ಧಾರ ತೆಗೆದುಕೊಂಡಿರುವದಾಗಿ ತಿಳಿಸಿದರು.

ರಾಜಕೀಯ ನಿವೃತ್ತಿ ಕುರಿತು ಹೆಚ್ಚಿನ ವಿವರಗಳನ್ನು ಏಪ್ರಿಲ್ 25 ಅಥವಾ 26ರ ನಂತರ ಮಾತನಾಡುವುದಾಗಿ ಹೇಳಿದರು.

Advertisements

ರಾಜಕಾರಣದಿಂದ ದೂರ ಉಳಿದರೂ ಸಾಮಾಜಿಕ ಮತ್ತು ಅಭಿವೃದ್ಧಿಪರ ಸಂವಿಧಾನಬದ್ಧ ಕಾರ್ಯಕ್ರಮಗಳು ಮತ್ತು ಚಳವಳಿಗಳಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿರುವುದು ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುತ್ತಾರೆ ಎಂದು ಅರಂಭದಿಂದ ಹೇಳಲಾಗುತ್ತಿತ್ತು. ಈ ಕಾರಣದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ವಿ ಆರ್‌ ಸುದರ್ಶನ್‌ ಅವರು ಹಿಂದೆ ಸರಿದಿದ್ದರು. ಆದರೆ, ಈಗ ಕೊತ್ನೂರು ಮಂಜುನಾಥ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡುವ ಸಾಧ್ಯತೆ ಇರುವ ಕಾರಣ ವಿ ಆರ್‌ ಸುದರ್ಶನ್‌ ಮನನೊಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ದ್ವಿಚಕ್ರ ವಾಹನ ಕಳ್ಳನ ಬಂಧನ: 22.20ಲಕ್ಷ ಬೆಲೆಯ 11 ವಾಹನಗಳು ಪೊಲೀಸರ ವಶ

ಬೈಕ್‌ಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆಸಾಮಿ ಸುಭಾನ್...

ಅಮೆರಿಕದ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಕೋಲಾರದ ಕಲಾವಿದ ಸ್ವಾಮಿ

ಆಗಸ್ಟ್ 29 ರಿಂದ 31 ರವರೆಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್...

ಕೋಲಾರ | ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಸಿ ರವಿ

ಕೋಲಾರ ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು...

ಕೋಲಾರ ಜಿಲ್ಲೆಯ ಕೈ ಶಾಸಕರ ಜತೆ ವಿಧಾನಸೌಧದಲ್ಲಿ ಸಿಎಂ ಸಿದ್ದು ಚರ್ಚೆ

ವಿಧಾನಸೌಧದಲ್ಲಿ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರು ಆಡಳಿತ ಪಕ್ಷದ ಶಾಸಕರುಗಳ ಜತೆ...

Download Eedina App Android / iOS

X