ದಾವಣಗೆರೆ | ವಿವಿ ಸಾಗರ ನಾಲೆಗಳಿಗೆ ತುರ್ತಾಗಿ ನೀರು ಹರಿಸಬೇಕು: ಕಸವನಹಳ್ಳಿ ರಮೇಶ್

Date:

Advertisements

ವಾಣಿ ವಿಲಾಸ(ವಿವಿ) ಸಾಗರ ನಾಲೆಗಳಿಗೆ ತುರ್ತಾಗಿ ನೀರು ಹರಿಸಬೇಕು ಎಂದು ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಒತ್ತಾಯಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಚೇರಿ ಎದುರು ನಿಂತು ಮನವಿ ಮಾಡಿ ಮಾತನಾಡಿದರು.

ನಾಲೆಗಳಿಗೆ ನೀರು ಹರಿಸಬೇಕೆಂದು ಜನವರಿ 28ರಂದು ಸಮಿತಿಯಿಂದ ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಗೆ ಮನವಿ ಪತ್ರ ನೀಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ನೀರು ಹರಿಸಿ ರೈತರ ಹಿತಾಸಕ್ತಿ ಕಾಪಾಡುವಂತೆ ಕೋರಿದ್ದರೂ ಕೂಡ ಈವರೆಗೆ ಯಾವುದೇ ರೀತಿಯ ಪ್ರಗತಿಯಾಗಿಲ್ಲ, ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

Advertisements

“ಕಳೆದ ವರ್ಷ ಭೀಕರವಾದ ಬರಗಾಲವಾಗಿ ಹಿರಿಯೂರು ತಾಲೂಕಿನಲ್ಲಿ ಅದರಲ್ಲೂ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮಳೆ ಬೀಳದೆ ಕೆರೆ ನೀರು ನಚ್ಚಿಕೊಂಡು ತೆಂಗು, ಅಡಿಕೆ, ಬಾಳೆ, ಪಪ್ಪಾಯಿ, ಶೇಂಗಾ ನಾಟಿ ಮಾಡಲಾಗಿದೆ. ಆದಕಾರಣ ಕೊಳವೆ ಬಾವಿಗಳು ಅಂತರ್ಜಲ ಕೊರತೆಯಿಂದ ಕೆಲವೊಂದು ನಿಂತು ಹೋಗಿವೆ. ಬಹಳಷ್ಟು ಕಡೆಗಳಲ್ಲಿ ಅಂತರ್ಜಲ ಕೆಳ ಮಟ್ಟಕ್ಕೆ ಹೋಗಿದೆ” ಎಂದರು.

“ಜಿಲ್ಲಾಧಿಕಾರಿಯವರು ತುರ್ತಾಗಿ ಸಂಬಂಧಪಟ್ಟ ಕೃಷಿ ತೋಟಗಾರಿಕೆ ರೇಷ್ಮೆ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರ ಅಧಿಕಾರಿಗಳ ಸಲಹೆ ಪಡೆದು ಶೀಘ್ರದಲ್ಲೇ ನೀರು ಹರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಐದು ಗ್ಯಾರಂಟಿ ಯೋಜನೆಗಳು ಜನಪರವಾಗಿವೆ : ಶಾಸಕ ಟಿ. ರಘುಮೂರ್ತಿ

ಈ ಸಂದರ್ಭದಲ್ಲಿ ನಿರ್ದೇಶಕ ಮಂಜುನಾಥ್ ಮಾಳಿಗೆ, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ದೊಡ್ಡಘಟ್ಟ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X