ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ

Date:

Advertisements

ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನರು ಈ ಬೆಲೆ ಏರಿಕೆಯಿಂದ ತತ್ತರಿಸಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ಬ್ರ್ಯಾಂಡ್’ ಅಕ್ಕಿ ಫೆಬ್ರುವರಿ 6ರಿಂದ ಸಿಗಲಿದೆ.

ಸದ್ಯ ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿ ವಾಹನಗಳಿಗೆ ಫೆಬ್ರುವರಿ 6ರಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಮೊದಲ ಹಂತದಲ್ಲಿ 5 ಲಕ್ಷ ಟನ್ ಅಕ್ಕಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಇಂದಿನಿಂದ ಮಾಡಲಾಗುತ್ತದೆ. ಎನ್‌ಸಿಸಿಎಫ್‌ನ ಮುಖ್ಯ ಗೋದಾಮು ಯಶವಂತಪುರದಲ್ಲಿದ್ದು, ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.

Advertisements

ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ ₹29 ದರ ನಿಗದಿ ಮಾಡಲಾಗಿದೆ. ತಲಾ 5 ಕೆಜಿ, 10 ಕೆಜಿ ಬ್ಯಾಗ್‌ಗಳಲ್ಲಿ ಅಕ್ಕಿ ಮಾರಾಟ ಮಾಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಕೆಜಿ ಅಕ್ಕಿಗೆ ₹29 | ‘ಅನ್ನಭಾಗ್ಯ’ಕ್ಕೆ ಕಲ್ಲು ಹಾಕುವ ಮೋದಿ ಸರ್ಕಾರದ ಚುನಾವಣಾ ತಂತ್ರಗಾರಿಕೆ

ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯಲಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಸೇರಿದಂತೆ ಆನ್​ಲೈನ್​ನಲ್ಲಿಯೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದಾಗಿದೆ. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ.

ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ. ಇನ್ನೊಂದು ವಾರದಲ್ಲಿ ಮಂಡ್ಯ  ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X