ಬಿಜೆಪಿ ಪ್ರತಿಭಟನೆ | ಮನುಷ್ಯತ್ವ ಇಲ್ಲದ ರಾಜ್ಯ ಸರಕಾರ; ಪಿ.ರಾಜೀವ್ ಟೀಕೆ

Date:

Advertisements

“ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ದನಗಳನ್ನು ತೆಗೆದುಕೊಂಡು ಹೋಗಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಎಚ್ಚರಿಕೆ ನೀಡಿದರು.

ಬಿಜೆಪಿ ಬೆಂಗಳೂರು ಮಹಾನಗರ ವತಿಯಿಂದ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಸರಕಾರದ ವಿರುದ್ಧ ಜಾನುವಾರುಗಳು ತಿರುಗಿ ಬಿದ್ದಿವೆ. ಜಾನುವಾರುಗಳಿಗೆ ಪಶು ಆಸ್ಪತ್ರೆಗಳಿಲ್ಲ” ಎಂದರು.

“ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪಶು ಆಸ್ಪತ್ರೆಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡುವ ಮುಖಾಂತರ ಬೆಂಗಳೂರಿನಲ್ಲಿ ಹಾಲು ಉತ್ಪಾದಕರೂ ಇರಬಾರದು; ಹಾಲು ಕೊಡುವ ಗೋವುಗಳೂ ಇರಬಾರದು ಎಂಬ ಗೋವಿರೋಧಿ ಸರಕಾರ ರಾಜ್ಯದ್ದು” ಎಂದು ಟೀಕಿಸಿದರು.

Advertisements

“ಹಾಲಿನ ಮನಸ್ಸುಗಳನ್ನು ವಿರೋಧಿಸುವ ಸರಕಾರ ರಾಜ್ಯದಲ್ಲಿದೆ. ಜಾನುವಾರುಗಳ ಜೊತೆ ನಾವು ವಿಧಾನಸೌಧ ಮುತ್ತಿಗೆ ಹಾಕುತ್ತೇವೆ ಎಂದು ಪ್ರಕಟಿಸಿದರು. ರೈತರಿಗೆ ಯಡಿಯೂರಪ್ಪನವರು ನೀಡುತ್ತಿದ್ದ ರೂ. 4 ಸಾವಿರ ಮೊತ್ತವನ್ನು ನಿಲ್ಲಿಸಿದ್ದಾರೆ. ಯಂತ್ರಧಾರೆಯ ಡೀಸೆಲ್ ಹಣವನ್ನು ನಿಲ್ಲಿಸಿದ್ದಾರೆ. ರೈತ ವಿದ್ಯಾಸಿರಿ ಸ್ಕಾಲರ್‌ಶಿಪ್‌ ಅನ್ನು ಸ್ಥಗಿತಗೊಳಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ರೈತರಿಗೆ ಕೃಷಿ ಇಲಾಖೆಯ ಸಬ್ಸಿಡಿ ಯಂತ್ರಗಳನ್ನೂ ಕೊಡುತ್ತಿಲ್ಲ. 850ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಇದರ ಕುರಿತು ತುಟಿ ಬಿಚ್ಚಿಲ್ಲ. ರೈತರು ದುಡ್ಡಿನ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೃಷಿ ಸಚಿವರು ಅತ್ಯಂತ ಅನಾಗರಿಕವಾಗಿ ಮಾತನಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ ಎಸ್ ನಡಹಳ್ಳಿ ಮಾತನಾಡಿ, “ಬಿಜೆಪಿ, ಯಡಿಯೂರಪ್ಪ ಅವರು ಜಾರಿಗೊಳಿಸಿದ ಎಲ್ಲ ರೈತಪರ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. ಹಾಲಿನ ಪ್ರೋತ್ಸಾಹಧನ, ವಿದ್ಯಾಸಿರಿ ಶಿಷ್ಯವೇತನ ಸೇರಿ ಎಲ್ಲ ರೈತಪರ ಯೋಜನೆಗಳನ್ನು ನಿಲ್ಲಿಸಲಾಗಿದೆ” ಎಂದು ಟೀಕಿಸಿದರು.

“ಹಾಲಿನ ಪ್ರೋತ್ಸಾಹಧನ ನಿಲ್ಲಿಸಿ, ಅಧಿಕಾರ, ಮತಕ್ಕಾಗಿ ಖಜಾನೆಯಲ್ಲಿ ಇರುವ ದುಡ್ಡನ್ನು ಬೇಡದೆ ಇರುವವರಿಗೆಲ್ಲ ಖಾತೆಗೆ ಹಾಕುವ ಸರಕಾರ ಇದು. ಹಾಲು ಉತ್ಪಾದಕ ರೈತರು, ರೈತ ಮಹಿಳೆಯರಿಗೆ ವಿಷ ಕೊಡುವ ಕೆಲಸವನ್ನು ಸಿದ್ದರಾಮಯ್ಯರ ಸರಕಾರ ಮಾಡುತ್ತಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಾನುವಾರುಗಳ ಜೊತೆ ಸಾಂಕೇತಿಕ ಹೋರಾಟ ಮಾಡಲಾಗುತ್ತಿದೆ” ಎಂದರು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

Download Eedina App Android / iOS

X