ಮಂಗನಕಾಯಿಲೆ | ಆರೋಗ್ಯ ಇಲಾಖೆಯ ವೈಫಲ್ಯದಿಂದ ಇಬ್ಬರ ಸಾವು: ಆರ್ ಅಶೋಕ್ ಆರೋಪ

Date:

Advertisements

“ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ. ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು” ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ.

Advertisements

“ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಈ ವರ್ಷ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅರಮನೆ ಕೊಪ್ಪದ ಯುವತಿ ಅನನ್ಯ(18) ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಧರೇಕೊಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯಗೌಡ (79) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿಯಲ್ಲಿ ರೋಗ ಕಾಣಿಸಿಕೊಂಡ ಬಗ್ಗೆ ವರದಿಗಳಿವೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು, ಶೃಂಗೇರಿ ಮತ್ತು ಕೊಪ್ಪ ಭಾಗದ ಅನೇಕ ಗ್ರಾಮಗಳಲ್ಲಿ ಒಂದೇ ದಿನಕ್ಕೆ ಹತ್ತು-ಹದಿನೈದು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡು ಭೀತಿ ಮೂಡಿಸಿದೆ” ಎಂದಿದ್ದಾರೆ.

“ಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್ ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನ ಆರೋಗ್ಯ ಭವನದಲ್ಲಿ ಠಿಕಾಣಿ ಹೂಡಿರುವ ಹಿರಿಯ ಅಧಿಕಾರಿಗಳನ್ನು ತಕ್ಷಣ ನೋಡಲ್ ಅಧಿಕಾರಿಗಳಾಗಿ ಮೂರು ಜಿಲ್ಲೆಗಳಿಗೆ ನೇಮಕ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು” ಎಂದು ಅಶೋಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಿಹಾರ ಕೊಡಿ

“ಈಗಾಗಲೇ ಕೆ ಎಫ್ ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು” ಎಂದು ಅಶೋಕ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X