ಜಮೀನು ಕಬಳಿಸಿದ ಆರೋಪದ ಮೇಲೆ ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರ್.ಆರ್.ನಗರದಲ್ಲಿ ಬಂಧಿಸಿದ್ದಾರೆ.
ಬೇರೆಯವರ 16 ಎಕರೆ ಜಮೀನಿನ ನಕಲಿ ದಾಖಲೆ ಸೃಷ್ಟಿ ಮಾಡಿ, ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ.
ಬಸವರಾಜ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಕೃಷ್ಣಪ್ಪನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.