ಅಂಡರ್‌ 19 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಭಾರತ

Date:

Advertisements

ಸಚಿನ್ ದಾಸ್‌ ಸ್ಫೋಟಕ ಆಟ ಹಾಗೂ ನಾಯಕ ಉದಯ್‌ ಸಹರನ್ ಅವರ ಆಕರ್ಷಕ ಆಟದಿಂದ ಭಾರತದ ಕಿರಿಯರ ತಂಡ ದಕ್ಷಿಣ ಆಫ್ರಿಕಾ ಕಿರಿಯರ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ  50 ಓವರ್‌ಗಳ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್ ಪ್ರವೇಶಿಸಿತು.

ದಕ್ಷಿಣ ಆಫ್ರಿಕಾದ ಬೆನೋನಿಯ ವಿಲ್ಲೋಮೊರೆ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಹರಿಣ ತಂಡ ನೀಡಿದ್ದ 245 ರನ್‌ಗಳ ಸವಾಲನ್ನು ಬೆನ್ನಟ್ಟಿದ  ಟೀಂ ಇಂಡಿಯಾದ ಕಿರಿಯರ ಪಡೆ 48.5 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಆರಂಭದಲ್ಲಿ 10 ಓವರ್‌ಗಳಾಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾದ ಟೀಂ ಇಂಡಿಯಾಗೆ 171 ರನ್‌ಗಳ ಐದನೇ ವಿಕೆಟ್ ಜೊತೆಯಾಟದಲ್ಲಿ ಮಧ್ಯಮ ಕ್ರಮಾಂಕದ ಆಟಗಾರ ಸಚಿನ್ ದಾಸ್ ಹಾಗೂ ನಾಯಕ ಉದಯ್‌ ಸಹರನ್ ತಂಡವನ್ನು ಅಪಾಯದಿಂದ ಪಾರು ಮಾಡಿದರು.

Advertisements

ಕೇವಲ 4 ರನ್‌ಗಳಿಂದ ಶತಕ ತಪ್ಪಿಸಿಕೊಂಡ ಮಧ್ಯಮ ಕ್ರಮಾಂಕದ ಆಟಗಾರ ಸಚಿನ್ ದಾಸ್ 95 ಚೆಂಡುಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 96 ರನ್‌ ಬಾರಿಸಿದರೆ, ನಾಯಕ ಉದಯ್‌ ಶರಣ್‌  124 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 81 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು.

ಈ ಸುದ್ದಿ ಓದಿದ್ದೀರಾ? ರಜೆ ನೀಡಿ ಮೋದಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆದೇಶಿಸಿದ ಗೋವಾ ಸರ್ಕಾರ

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾದ ಕಿರಿಯರ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 244 ರನ್‌ ಗಳಿಸಿತು. ಆರಂಭಿಕ ಆಟಗಾರ ಆರಂಭಿಕ ಆಟಗಾರ ಲಾನ್‌ ದ್ರೆ ಪ್ರಟೋರಿಯಸ್‌ (76),  ರಿಚರ್ಡ್‌ ಸೆಲಿಸ್ಟಾವನೆ (64) ಅರ್ಧ ಶತಕದ ನೆರವಿನಿಂದ ತಂಡ 240ರ ಗಡಿ ದಾಟಲು ಸಾಧ್ಯವಾಯಿತು.

ಭಾರತದ ಕಿರಿಯರ ಪರ ರಾಜ್‌ ಲಿಂಬಿನಿ 60/3, ಮುಶೀರ್ ಖಾನ್ 43/2 ಹಾಗೂ  ಸುಮಯ್‌ ಪಾಂಡೆ ಹಾಗೂ ನಮನ್‌ ತಿವಾರಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಫೆ.8 ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಕಿರಿಯರ ನಡುವೆ ಮತ್ತೊಂದು ಸೆಮಿಫೈನಲ್ ಪಂದ್ಯ ನಡೆಯಲಿದ್ದು  ಅಲ್ಲಿ ವಿಜೇತರಾದ ತಂಡ ಫೆ.11 ರಂದು ನಡೆಯುವ ಫೈನಲ್‌ನಲ್ಲಿ ಭಾರತದ ಕಿರಿಯರನ್ನು ಸೆಣಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X