- ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ
- ಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯ
ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಿರೀಕ್ಷೆಯಂತೆಯೇ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ ಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಜೆಡಿಎಸ್ ತೊರೆದು ‘ಕೈ’ ಹಿಡಿದಿದ್ದ ಶಿವಲಿಂಗೇಗೌಡ ಅವರಿಗೆ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ರಾಯಭಾಗ ಬೆಳಗಾವಿ ಉತ್ತರ ಕ್ಷೇತ್ರದಿಂದ ಆಸೀಫ್ ಸೇಠ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ರೇವು ನಾಯ್ಕ್ ಬೆಳಮಗಿ, ಮಾನ್ವಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಹಂಪಯ್ಯ ನಾಯಕ, ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಸಿದ್ದಪ್ಪ ಕೊನ್ನೂರು ಅವರ ಹೆಸರು ‘ಫೈನಲ್’ ಆಗಿದೆ. ನವಲಗುಂದಾ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಬಂದಿದ್ದ ಎನ್ ಎಚ್ ಕೋನರೆಡ್ಡಿ ಅವರಿಗೆ ನಿರೀಕ್ಷೆಯಂತೆಯೇ ಟಿಕೆಟ್ ಲಭಿಸಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಜಿ ಬಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.