ನಾಳೆ ಮುಖ್ಯಮಂತ್ರಿಯಿಂದ ರಾಜ್ಯಮಟ್ಟದ ಜನತಾದರ್ಶನ: ವಿಧಾನಸೌಧದಲ್ಲಿ ಸಕಲ ಸಿದ್ಧತೆ

Date:

Advertisements
  • ನೋಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
  • ನವೆಂಬರ್‌ ಜನತಾ ದರ್ಶನ: 4030 ಅರ್ಜಿಗಳ ಪೈಕಿ ಈವರೆಗೆ 3738 ಅರ್ಜಿ ವಿಲೇವಾರಿ

ನಾಳೆ(ಫೆ.8) ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್‌, ಅಧಿಕಾರಿಗಳ ನಿಯೋಜನೆ ಹಾಗೂ ಎಸ್.ಒ.ಪಿ ಜಾರಿ ಮಾಡಿ ಸರ್ಕಾರ ಆದೇಶಿಸಿದೆ.

ಇಲಾಖಾವಾರು ಕೌಂಟರ್‌:
ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್‌ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ.

Advertisements

ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ಕೌಂಟರ್ ತೆರೆಯಲಾಗಿದೆ.

ಅಲ್ಲಿ ನಾಗರಿಕರ ಮೊಬೈಲ್ ನಂಬರ್ ಮತ್ತು ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್‌ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್‌ನಲ್ಲಿ ಇರಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು, ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ BUGGY, ವ್ಹೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ. ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.
.
3738 ಅರ್ಜಿ ವಿಲೇವಾರಿ
ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X