ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸುವಂತೆ ಎನ್‌ಎಸ್‌ಯುಐ ಅಗ್ರಹ

Date:

Advertisements

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಕುರಿತು ಒಂದು ಧರ್ಮವನ್ನು ಹಿಯಾಳಿಸಿ ಚಕ್ರವರ್ತಿ ಸೂಲಿಬೆಲೆ ಅವರು ಸಾರ್ವಜನಿಕವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಮುಖಂಡರು ಶಿವಮೊಗ್ಗ ಜಯನಗರ ಠಾಣೆ ಇನ್ಸ್‌ಪೆಕ್ಟರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

“ಕರ್ನಾಟಕ ಸರ್ಕಾರವು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಹೊರಡಿಸಿದ್ದು, ಸದರಿ ಪಟ್ಟಿಯಲ್ಲಿ ಮಾರ್ಚ್‌ 01ರ ಶುಕ್ರವಾರ ವಿಜ್ಞಾನ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ರಿಂದ 5.15ರವರೆಗೆ ನಿಗದಿಪಡಿಸಿದೆ. ಆ ದಿನ ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆಯು ಆರಂಭವಾಗುತ್ತಿದ್ದು, ಬೆಳಗಿನ ಸಮಯದಲ್ಲಿ ಸದರಿ ಪರೀಕ್ಷೆಯು ಇರುವ ಕಾರಣ ಈ ರೀತಿ ಸಮಯವನ್ನು ಬದಲಿಸಿದ್ದಾರೆ” ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ತಿಳಿಸಿದ್ದಾರೆ.

WhatsApp Image 2024 02 07 at 3.36.28 PM 1ಸೂಲಿಬೆಲೆ 4

“ಉಳಿದ ಎಲ್ಲ ಪರೀಕ್ಷೆಗಳು ಬೆಳಗಿನ ಸಮಯಕ್ಕೆ ನಿಗದಿಯಾಗಿದ್ದು, ಮಾರ್ಚ್‌ 1ರ ಶುಕ್ರವಾರದಂದು ದ್ವಿತೀಯ ಪಿಯುಸಿ ಪರೀಕ್ಷೆ ಇರುವ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ನಿಗದಿಪಡಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಚಕ್ರವರ್ತಿ ಸೂಲಿಬೆಲೆ ಸದರಿ ಪರೀಕ್ಷಾ ವೇಳಾಪಟ್ಟಿಯಲ್ಲಿ ದಿನಾಂಕ 1.03.2024ರ ಶುಕ್ರವಾರ ಪರೀಕ್ಷಾ ದಿನಕ್ಕೆ ನೋಡಿದ ತಕ್ಷಣ ಎದ್ದು ಕಾಣುವಂತೆ ಮಾಡಿ ಸದರಿ ವೇಳಾಪಟ್ಟಿಯ ಮೇಲುಭಾಗದಲ್ಲಿ ಇಂಗ್ಲೀಷ್‌ನಲ್ಲಿ “KARNATAKA STATE 10 STANDARD EXAM TIME TABLE RELEASED, ALL THE EXAM IN THE MORNING SESSION BUT FOR FRIDAY, WHY ?. OH.. TIME FOR NAMAZ?” ಎಂದು ಬರೆದಿದ್ದು, ಅಂತರ್‌ಧರ್ಮೀಯರಿಗೆ ನೋವಾಗುವಂತೆ, ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಮುಸಲ್ಮಾನರ ಧರ್ಮದ ಬಗ್ಗೆ ಕೆಟ್ಟ ಭಾವನೆ ಬರುವಂತೆ ಹಾಗೂ ಈ ಮೂಲಕ ಸರ್ಕಾರವೂ ಸಹ ಒಂದು ಧರ್ಮದ ಪರವಿದೆ ಎಂಬ ಭಾವನೆ ಬರುವಂತೆ ಮಾಡಿ ಸಮಾಜದ ಅಶಾಂತಿಗೆ ಕಾರಣೀಭೂತರಾಗಿದ್ದಾರೆ” ಎಂದು ಆರೋಪಿಸಿದರು.

Advertisements

ಎನ್‌ಎಸ್‌ಯುಐ ದೂರು

ಸೂಲಿಬೆಲೆಯ ಇಂತಹ ಪೋಸ್ಟ್‌ನಿಂದ ಸಮಾಜದಲ್ಲಿ ಅಶಾಂತಿಯುಂಟಾಗಿ ಕೋಮು ಗಲಭೆ ಆಗುವ ಸಾಧ್ಯತೆಗಳಿವೆ. ಇದರಿಂದ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭೇದ-ಭಾವ ಉಂಟಾಗುತ್ತದೆ. ಹಾಗಾಗಿ ಸದರಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರ ಮನೆಗೆ ಮುತ್ತಿಗೆಗೆ ಯತ್ನ; ಎನ್‌ಎಸ್‌ಯುಐ ಪ್ರತಿಭಟನೆ

“ಸದರಿ ಪೋಸ್ಟಿನ ನಕಲಿ ಕಾಪಿ ಮತ್ತು ಅದರ ಸಿಡಿಯನ್ನು ದೂರಿನೊಂದಿಗೆ ಲಗತ್ತಿಸಿಸಿದ್ದು, ಕೂಡಲೇ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಬೇಕು” ಎಂದು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ವಿಜಯ್ ಕುಮಾರ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಗಿರೀಶ್, ಚೇತನ್, ಹರ್ಷಿತ್, ಮಂಜುನಾಥ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X