ಫೆಬ್ರುವರಿ 14ರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ: ಎಲ್ಲೆಲ್ಲಿ?

Date:

Advertisements

ಫೆಬ್ರುವರಿ 14ರ ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ಬೆಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶ ಹೊರತುಪಡಿಸಿ ನಗರದ ಉಳಿದ ಕಡೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

“ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆ, 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135(ಸಿ) ಅಡಿಯಲ್ಲಿ ಮತ್ತು ಕರ್ನಾಟಕ ಅಬಕಾರಿ ನಿಯಮ 1967ರ 10 (ಬಿ)ಯನ್ನು ಪರಿಗಣನೆಗೆ ತೆಗೆದುಕೊಂಡು ಮದ್ಯ ಮಾರಾಟ ನಿಷೇಧಿಸಲಾಗಿದೆ” ಎಂದು ಬೆಂಗಳೂರು ನಗರ ಉಪ ಆಯುಕ್ತ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ₹6 ಕೋಟಿ ವಂಚನೆ

Advertisements

“ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು ಮತದಾನ ಮಾಡಲಿದ್ದಾರೆ. ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫೆ.23ರವರೆಗೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X