ಧಾರವಾಡ | ಜಗತ್ತಿನಲ್ಲಿ ಎಲ್ಲದಕ್ಕಿಂತ ʼಜ್ಞಾನʼದ ಮೌಲ್ಯ ಹೆಚ್ಚು: ಕುಲಸಚಿವ ಎ ಚೆನ್ನಪ್ಪ

Date:

Advertisements

ಜಗತ್ತಿನಲ್ಲಿ ಎಲ್ಲದಕ್ಕಿಂತ ಜ್ಞಾನಕ್ಕೆ ಬೆಲೆಯಿದೆ ಮತ್ತು ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವು ನಮ್ಮಲ್ಲಿ ಮೂಡಿದಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಸಮಾಜದಲ್ಲಿ ಎಲ್ಲಿಯಾದರೂ ಒಂದು ದೊಡ್ಡ ಗೌರವ ಮತ್ತು ಸ್ವಾಗತ ಬೇಕು ಅಂದರೆ ಅದು ಒಳ್ಳೆಯ ಪಾಂಡಿತ್ಯದ ಜ್ಞಾನದಿಂದ ಮಾತ್ರ ಎಂದು ಕವಿವಿ ಕುಲಸಚಿವ ಎ ಚೆನ್ನಪ್ಪ ಅವರು ಹೇಳಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ಇನ್‌ಕಮ್ ಇದ್ದರೆ ಸಮಾಜದಲ್ಲಿ ವೆಲ್‌ಕಮ್ ಸಿಗುತ್ತದೆ ಇಲ್ಲಿ ಇನ್‌ಕಮ್ ಎಂದರೆ ಅತಿಯಾದ ಕಾನೂನು ಜ್ಞಾನವನ್ನು ಪಡೆದುಕೊಳ್ಳುವುದು ಎಂದು ಅರ್ಥ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

Advertisements

ಮಹಾವಿದ್ಯಾಲಯದ ‌ಪ್ರಾಂಶುಪಾಲೆ ಡಾ ಎಸ್ ಆರ್ ಮಂಜುಳಾ ಅವರು ಮಾತನಾಡಿ, “ಕಾಲೇಜಿನ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಬೆಂಚ್ ಹಾಗೂ ಇನ್ನಿತರ ಉಪಕರಣಗಳ ಅವಶ್ಯಕತೆ ಇದೆ. ಶಿಥಿಲಗೊಂಡಿರುವ ಕಾರ್ಯಕ್ರಮದ ಸಭಾಂಗಣವನ್ನು ಅಭಿರುದ್ಧಿಪಡಿಸುವಂತೆ ಮತ್ತು ಮಹಾವಿದ್ಯಾಲಯಕ್ಕೆ ಖಾಯಂ ಶಿಕ್ಷಕರನ್ನು ನೇಮಿಸಬೇಕು” ಎಂದು ನೆರೆದ ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಕುಲಸಚಿವರಿಗೆ ಮನವರಿಕೆ ಮಾಡುವ ಮೂಲಕ ಬೇಡಿಕೆಯಿಟ್ಟರು.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ಕುಲಸಚಿವರು ಪ್ರಾಂಶುಪಾಲರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ವಿಭಿನ್ನರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಪ್ರಾಧ್ಯಾಪಕರುಗಳಾದ ಡಾ ಆರ್ ಎಂ ಕಾಂಬಳೆ, ಡಾ. ಶಶಿರೇಖಾ ಮಾಳಗಿ, ಡಾ. ಶಿವಕುಮಾರ ಎಂ ಎ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X