ರಾಮನಗರ | ಕೇಂದ್ರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

Date:

Advertisements

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಬುಧವಾರ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್‌ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, “ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸಮಾನವಾದ ತೆರಿಗೆ ಹಂಚಿಕೆ ಮಾಡಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ ಮಾಡಿ ಧೋರಣೆ ಅನುಸರಿಸುತ್ತಿದೆ” ಎಂದು ಆರೋಪಿಸಿದರು.

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ತಾಲೂಕಿನಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಕುದೂರು ವಿನಯ್ ಮಾತನಾಡಿ, “ಕೇಂದ್ರ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುವ ಮೂಲಕ ದ್ರೋಹ ಮಾಡುತ್ತಿದೆ. ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನ ₹308 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ನೀಡಿದ ಎನ್‌ಡಿಎಫ್‌ಆರ್‌ನ ಅನುದಾನ ಕೇವಲ ₹3708.14 ಕೋಟಿ ಮಾತ್ರ. ಈ ಮೂಲಕ ಧೋರಣೆ ನೀತಿ ಅನುಸರಿಸುತ್ತಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನದ ಸಮರ್ಪಕ ಹಂಚಿಕೆಗೆ ಆಗ್ರಹ

“2022-23ರಲ್ಲಿ ಕರ್ನಾಟಕಕ್ಕೆ ಬರ ಪರಿಹಾರವಾಗಿ ₹17,901,73 ಕೋಟಿ ಪರಿಹಾರಕ್ಕೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ಸಮರ್ಪಕ ಅನುದಾನ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಎಚ್ ಜೆ ಪುರುಷೋತ್ತಮ್, ಬಿಡದಿ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ, ಸುರೇಶ್, ಅಬೀದ್, ರಂಗನಾಥ್, ಬಲರಾಮ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ...

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X