ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಮನವಿಸಲ್ಲಿಸಿದೆ.
ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ, ಭಾರತ ಸಂವಿಧಾನದಂತೆ ದೇಶದಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು, ಈ ಕೂಡಲೆ ನಿಲ್ಲಿಸುವಂತೆ ಹಾಗೂ ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ.
ಕರ್ನಾಟಕ ಹಾಗೂ ಕೇರಳ ಸರಕಾರಗಳು. ಒಕ್ಕೂಟ ಸರ್ಕಾರದ ಕಿರುಕುಳ ಹಾಗೂ ತಾರತಮ್ಯ ನೀತಿಯ ವಿರುದ್ಧ ಇದೆ ಫೆಬ್ರವರಿ 7, 8ರಂದು ನವದೆಹಲಿಯಲ್ಲಿ ನಡೆಸಲಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಹೇಳಿದೆ.
ಹಕ್ಕೊತ್ತಾಯಗಳು
1) ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಈ ಕೂಡಲೆ ಬಿಡುಗಡೆ ಮಾಡಬೇಕು.
2) ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು.
3) ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ದ ಮದ್ಯಪ್ರವೇಶ ಮಾಡಬಾರದು.
4)ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಟ್ಟುಕೊಂಡು ಒಕ್ಕೂಟ ಸರ್ಕಾರ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆ ವಿಭಾಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು.
5) ರಾಜ್ಯ ಸರ್ಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು.
6) ರಾಜ್ಯದ ವಿಶ್ವವಿದ್ಯಾಲಯಗಳ ವಿಷಯದಲ್ಲಿ ಕುಲಪತಿಗಳಾಗಿ ರಾಜ್ಯಪಾಲರ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು.
7) ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಮತ್ತು ವಿಳಂಬ ಮಾಡದೆ ಸಹಿ ಮಾಡುವಂತೆ ಕ್ರಮವಹಿಸಬೇಕು.
ಎಂದು ಅಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದರು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಪ್ರತಿಭಟನೆ ನಡೆಸಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ. ನಾರಾಯಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.