- ಟಿಕೆಟ್ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ
- ಷರತ್ತುಗಳಿಲ್ಲದೆ ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ
ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ ಬೆಂಗಳೂರಿನಲ್ಲಿ ಜೆಡಿಎಸ್‍ನ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಗುಬ್ಬಿ ಕ್ಷೇತ್ರದಲ್ಲಿದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಅನ್ನು ಕಟ್ಟಿ ಬೆಳೆಸುವಲ್ಲಿ ಬೆಟ್ಟಸ್ವಾಮಿ ಮತ್ತು ಹೊನ್ನಗಿರಿಗೌಡ ಪ್ರಮುಖ ಪಾತ್ರವಹಿಸಿದ್ದಾರೆ. ಈ ಇಬ್ಬರೂ ಈ ಬಾರಿ ತಮ್ಮ ಪಕ್ಷಗಳಿಂದ ಟಿಕೆಟ್ ಅಕಾಂಕ್ಷಿಗಾಳಗಿದ್ದರು. ಆದರೆ, ಈ ಇಬ್ಬರಿಗೂ ಉಭಯ ಪಕ್ಷಗಳು ಟಿಕೆಟ್ ನೀಡಲು ನಿರಾಕರಿಸಿವೆ.
ಅಲ್ಲದೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲವೆಂದು ಆರೋಪಿಸಿರುವ ಇಬ್ಬರೂ, ಯಾವುದೇ ಷರತ್ತುಗಳಿಲ್ಲದೆ ಜೆಡಿಎಸ್ ಸೇರಲು ಮುಂದಾಗಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ
ಗುಬ್ಬಿಯಲ್ಲಿ ನಡೆಯುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಬೆಟ್ಟಸ್ವಾಮಿ ಮತ್ತು ಹೊನ್ನಗಿರಿಗೌಡ ಅವರನ್ನು ಎಚ್.ಡಿ ಕುಮಾರಸ್ವಾಮಿ ಅವರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.
ಇವರ ಜೊತೆಗೆ ಗುಬ್ಬಿ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ನರಸಿಂಹಯ್ಯ ಸಹ ಜೆಡಿಎಸ್ ಸೇರಲಿದ್ದಾರೆ.