ಕೊಡಗು | ನಾಗರಹೊಳೆ ಅರಣ್ಯ: ಪ್ರವೇಶ ದ್ವಾರದಲ್ಲಿ ಎಲ್ಲ ವಾಹನಗಳಿಗೂ ಶುಲ್ಕ

Date:

Advertisements
  • ಕೊಡಗು ಅರಣ್ಯ ಪ್ರದೇಶಗಳಲ್ಲಿ ಕಸ ನಿಯಂತ್ರಣಕ್ಕೆ ಹರಸಾಹಸ
  • ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಸ್ಥಗಿತ

ಕೊಡಗು ಜಿಲ್ಲೆಯ ನಾಗರಹೊಳೆಯ ಅರಣ್ಯ ದ್ವಾರಗಳಲ್ಲಿ ಅಂತರರಾಜ್ಯ ವಾಹನಗಳು ಮಾತ್ರವಲ್ಲದೆ ರಾಜ್ಯದ ವಾಹನಗಳೂ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ಕಸ ಎಸೆಯುತ್ತಿರುವುದನ್ನು ಕೊನೆಗೊಳಿಸಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

“ಅರಣ್ಯದ ಅಂಚಿನಲ್ಲಿ ಕಸ ಎಸೆಯುವುದನ್ನು ನಿಯಂತ್ರಿಸುವುದು ಇಲಾಖೆಗೆ ಸವಾಲಾಗಿದೆ. ಆದರೆ, ನಾಗರಹೊಳೆ ಪ್ರವೇಶ ದ್ವಾರದಲ್ಲಿ ಕಟ್ಟುನಿಟ್ಟಾದ ತಪಾಸಣೆ ಮತ್ತು ಪ್ರವೇಶ ಶುಲ್ಕವನ್ನು ಜಾರಿಗೆ ತಂದ ಬಳಿಕ ಕೇರಳದಿಂದ ತಂದ ಭಾರೀ ಪ್ರಮಾಣದ ತ್ಯಾಜ್ಯ ವಸ್ತುಗಳನ್ನು ಕೊಡಗು ಅರಣ್ಯ ಪ್ರದೇಶಗಳಿಗೆ ಎಸೆಯುವುದನ್ನು ನಿಯಂತ್ರಿಸಲಾಗಿದೆ” ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್‌ ನಿರಂಜನ್ ಮೂರ್ತಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Advertisements

“ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕಸವನ್ನು ತಂದು ಸುರಿಯುತ್ತಿದ್ದ ದಕ್ಷಿಣ ಕೊಡಗಿನ ಮಾಕುಟ್ಟ ಗೇಟ್‌ನಲ್ಲಿ ಈಗ ಪ್ರವೇಶ ಶುಲ್ಕವನ್ನು ಸಂಗ್ರಹಿಸಲಾಗುವುದು. ಜನಪ್ರಿಯ ಪ್ರವಾಸಿ ತಾಣಗಳಾದ ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಮತ್ತು ಕಸ ಹಾಕುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ನಿಯಮಿತವಾಗಿ ಜಾಗರೂಕತೆ ವಹಿಸುತ್ತಿದೆ” ಎಂದರು.

“ಭಾಗಮಂಡಲ-ಕರಿಕೆ ರಸ್ತೆಯ ಜಲಪಾತದ ಬಳಿ ಪ್ರವಾಸಿಗರು ಪಾರ್ಕಿಂಗ್ ಮಾಡುತ್ತಾರೆ. ಈ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತು ಮದ್ಯದ ತ್ಯಾಜ್ಯವನ್ನು ಎಸೆಯುತ್ತಾರೆ. ಇದು ವನ್ಯಜೀವಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗಾಗಿ ಇದನ್ನು ನಿಯಂತ್ರಿಸಲು ಇಲಾಖೆ ಕಠಿಣ ತಪಾಸಣೆ ನಡೆಸುತ್ತಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X