2027ರ ಡಿಸೆಂಬರ್ ವೇಳೆಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ್‌ ಭರವಸೆ

Date:

Advertisements

ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಕೇಂದ್ರ ಸರಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್ ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್ ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ” ಎಂದು ಹೇಳಿದರು.

Advertisements

“ಶೇ.4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ಜರ್ಮನಿ ಬ್ಯಾಂಕ್ ನೀಡುತ್ತಿದೆ.‌ ಕೆಎಫ್ ಡಬ್ಲ್ಯು ನೀಡುತ್ತಿರುವ ಹಣವನ್ನು ಕೆಂಗೇರಿ-ವೈಟಫೀಲ್ಡ್ ನಡುವಿನ ಕಾರಿಡಾರ್-3ರ ಅಡಿ ಬರುವ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್-4ರ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿಯಲ್ಲಿನ ಡಿಪೋ-1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್ ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಗ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಶೀನ್ ಇಂಟರ್ಫೇಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕುರ್ಚಿಗಾಗಿ ಯುಪಿಎ ಸರ್ಕಾರ ಮಂಡಿಸಿದ ತೆರಿಗೆ ವಿಕೇಂದ್ರೀಕರಣಕ್ಕೆ ಜೈ ಎಂದಿದ್ದ ಸಿದ್ದರಾಮಯ್ಯ: ಬಿಜೆಪಿ ಟೀಕೆ

“ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜೊತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಸಬರ್ಬನ್ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯು ರಾಜ್ಯದ ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ” ಎಂದು ಪಾಟೀಲ್ ಹೇಳಿದರು.

“ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಈ ಯೋಜನೆಯು 58 ನಿಲ್ದಾಣಗಳನ್ನು ಹೊಂದಿರಲಿದ್ದು, ಒಟ್ಟು 4 ಕಾರಿಡಾರ್ ಗಳಲ್ಲಿ 148 ಕಿ.ಮೀ. ಉದ್ದ ಇರಲಿದೆ. ಈ ಯೋಜನೆಗೆ ಕೇಂದ್ರ ಸರಕಾರದ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರಕಾರಗಳು ತಲಾ ಶೇಕಡ 20ರಷ್ಟು ಹೂಡಿಕೆ ಮಾಡಲಿದ್ದು, ಬಾಹ್ಯ ಸಾಲದ ರೂಪದಲ್ಲಿ ಶೇ.60ರಷ್ಟು ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕೆಎಫ್ ಡಬ್ಲ್ಯು ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X