ಕೆಐಎ | 3 ಪ್ರತ್ಯೇಕ ಪ್ರಕರಣಗಳಲ್ಲಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನ ವಶ; 6 ಮಂದಿ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲಾಗುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬರೋಬ್ಬರಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡು, 6 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರ ಪೈಕಿ ಇಬ್ಬರು ತಮಿಳುನಾಡು ಮತ್ತು ನಾಲ್ವರು ಉತ್ತರ ಭಾರತದವರು ಎಂದು ಗುರುತಿಸಲಾಗಿದೆ.

ಮೊದಲ ಪ್ರಕರಣದಲ್ಲಿ, ಬೆಂಗಳೂರು ಏರ್​ಪೋರ್ಟ್​ಗೆ ಮಲೇಷ್ಯಾದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ತಪಸಾಣೆ ನಡೆಸಿದಾಗ ಒಳ ಉಡುಪಿನಲ್ಲಿ ಅಡಗಿಸಿಟ್ಟುಕೊಂಡಿದ್ದ ಪೇಸ್ಟ್ ರೂಪದ 2.632 ಕೆ.ಜಿ ಚಿನ್ನ ಪತ್ತೆಯಾಗಿತ್ತು. ಚಿನ್ನವನ್ನು ವಶಕ್ಕೆ ಪಡೆದ ಕಸ್ಟಮ್ಸ್‌ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

Advertisements

2.632 ಕೆ.ಜಿ ಚಿನ್ನದ ಮೌಲ್ಯ ಬರೋಬ್ಬರಿ ₹1.42 ಕೋಟಿ ಆಗಿದೆ. ಚಿನ್ನದ ಜತೆಗೆ ₹73.7 ಲಕ್ಷ ಮೌಲ್ಯದ 3,510 ಇ-ಸಿಗರೇಟ್​​ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಇನ್ನು ಎರಡನೇ ಪ್ರಕರಣದಲ್ಲಿ, ಮಲೇಶಿಯಾದ ಕೌಲಲಾಂಪುರದಿಂದ ಬೆಂಗಳೂರಿಗೆ ಬಂದ ಇಬ್ಬರನ್ನು ಬಂಧಿಸಿ, ಆರೋಪಗಳಿಂದ 2.854 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳು ಚಿನ್ನದ ಪೇಸ್ಟ್ ಅನ್ನು ತಮ್ಮ ಸಾಕ್ಸ್​ನಲ್ಲಿ ಅಡಗಿಸಿಟ್ಟುಕೊಂಡಿದ್ದರು. ಈ ಚಿನ್ನದ ಮೌಲ್ಯ ₹1.55 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

3ನೇ ಪ್ರಕರಣದಲ್ಲಿ ಶಾರ್ಜಾದಿಂದ ಬಂದ ವಿಮಾನದಲ್ಲಿ ಲಗೇಜ್ ಕ್ಯಾಬಿನ್​ನಲ್ಲಿ ಅಡಗಿಸಿಟ್ಟಿದ್ದ 3.75 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಲಗೇಜ್ ಪರಿಶೀಲಿಸುತ್ತಿದ್ದ ಅವಧಿಯಲ್ಲಿ ಈ ಚಿನ್ನವನ್ನು ಕ್ಯಾಬಿನ್​ನಲ್ಲೇ ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ. 3.75 ಕೆಜಿ ಗಟ್ಟಿ ಚಿನ್ನ ಪತ್ತೆಯಾಗಿದ್ದು, ಇದರ ವಾರಸುದಾರರ ಪತ್ತೆ ಕಾರ್ಯ ನಡೆಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X