ಕೊಪ್ಪಳ | ವೈರಲ್ ಫೀವರ್: ಆಸ್ಪತ್ರೆಯಾಗಿ ಮಾರ್ಪಟ್ಟ ದೇವಾಲಯ

Date:

Advertisements

ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಹಲವಾರು ಜನರು ಜ್ವರಕ್ಕೆ ತುತ್ತಾಗಿದ್ದಾರೆ. ಗ್ರಾಮದ ದೇವಸ್ಥಾನವನ್ನು ಆಸ್ಪತ್ರೆಯ ವಾರ್ಡ್‌ಆಗಿ ಮಾರ್ಪಡಿಸಲಾಗಿದೆ. ಜ್ವರಕ್ಕೆ ತುತ್ತಾದ ಗ್ರಾಮಸ್ಥರಿಗೆ ದಾವಸ್ಥಾನದ ಆವರಣದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಕಿ ಗ್ರಾಮದಲ್ಲಿ ಒಂದು ತಿಂಗಳ ಹಿಂದೆಯೇ ಜ್ವರ ಪ್ರಕರಣಗಳು ವರದಿಯಾಗಲು ಆರಂಭಿಸಿದ್ದವು. ಆದರೆ, ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲಿಲ್ಲ ವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಈಗ, ಅಧಿಕಾರಿಗಳು ಗ್ರಾಮದ ಭೀಮಾಂಬಿಕಾ ದೇವಸ್ಥಾನದಲ್ಲಿಯೇ ತಾತ್ಕಾಲಿಕ ಆರೋಗ್ಯ ಶಿಬಿರ ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ.

ದೇವಾಲಯವು ಈಗ ರೋಗಿಗಳು ಸತತವಾಗಿ ಮಲಗಿರುವ ವಾರ್ಡ್‌ ರೀತಿ ಕಾಣಿಸುತ್ತಿದೆ. ರೋಗಿಗಳಿಗೆ ಐವಿ ದ್ರವ ನೀಡಲಾಗುತ್ತಿದೆ. ಇದು ವೈರಲ್ ಜ್ವರದ ವಿರುದ್ಧ ಹೋರಾಡುತ್ತದೆ. ರೋಗಿಗಳ ಕುಟುಂಬಗಳು ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಿಬ್ಬಂದಿಗಳು ಹೇಳಿದ್ದಾರೆ.

Advertisements

ನೆರೆಬೆಂಚಿ ಗ್ರಾಮದಲ್ಲಿ ಒಟ್ಟು 1,200 ಜನಸಂಖ್ಯೆ ಇದ್ದು, ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ. ಸ್ವಚ್ಚತೆಯೂ ಸರಿಯಾಗಿಲ್ಲ. ಸುತ್ತಮುತ್ತಲಿನ ನೀರು ನಿಂತಲ್ಲೇ ನಿಲ್ಲುವುದರಿಂದ ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಗ್ರಾಮಸ್ಥರು ದೂರುತ್ತಾರೆ.

ಆರೋಗ್ಯ ಅಧಿಕಾರಿಗಳು ಕೊಪ್ಪಳಕ್ಕೆ ಕೆಲವು ರಕ್ತದ ಮಾದರಿಗಳನ್ನು ಕಳುಹಿಸಿದ್ದಾರೆ. ಗುರುವಾರ ಒಂದು ಚಿಕೂನ್‌ಗುನ್ಯಾ ಪ್ರಕರಣ ವರದಿಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆರೋಗ್ಯಾಧಿಕಾರಿಗಳು ಗ್ರಾಮಸ್ಥರಿಗೆ ಆತ್ಮವಿಶ್ವಾಸ ತುಂಬುತ್ತಿದ್ದರೂ, ಯೋಗದಿಂದ ಜೀವ ಕಳೆದುಕೊಳ್ಳಬಹುದೆಂಬ ಆತಂಕ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ. ಇಡೀ ಗ್ರಾಮವೇ ಕ್ವಾರಂಟೈನ್‌ನಲ್ಲಿದ್ದು, ಗ್ರಾಮಸ್ಥರು ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಗುರುವಾರ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ. ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಸಿಬ್ಬಂದಿಗೆ ತಿಳಿಸಿದ್ದಾರೆ.

ಕೊಪ್ಪಳ ಡಿಎಚ್‌ಒ ಲಿಂಗರಾಜ್ ಟಿ ಮಾತನಾಡಿ, “ನಾವು ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದೇವೆ. ತಾಲೂಕು ಆರೋಗ್ಯ ಅಧಿಕಾರಿಗಳು ಗ್ರಾಮದಲ್ಲಿದ್ದಾರೆ. ಶೀಘ್ರದಲ್ಲೇ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X