ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ನಡುವೆಯೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ, “ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು” ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ತದನಂತರ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನೂ ವಿಜಯೇಂದ್ರ ಭೇಟಿಯಾದರು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿಸಿ ಗದ್ದಿಗೌಡರ್, ಪಿಸಿ ಮೋಹನ್ ಕೂಡ ಉಪಸ್ಥಿತರಿದ್ದರು.
ಮೈಸೂರಿಗೆ ಅಮಿತ್ ಶಾ ಮೈಸೂರಿಗೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 10ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಆದರೆ, ಅವರ ಪೂರ್ವನಿಗದಿತ ಭೇಟಿಯಲ್ಲಿ ತುಸು ಬದಲಾವಣೆ ಆಗಿದೆ. ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ರದ್ದಾಗಿದ್ದು, ಮೈಸೂರಿಗಷ್ಟೇ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.
Had a fruitful meeting with senior Union Minister for Parliamentary Affairs, Coal, and Mines Shri @JoshiPralhad ji in New Delhi.
Alongside our party leaders we deliberated on preparations aligning our efforts to ensure success across all fronts.
ಕೇಂದ್ರ ಸಂಸದೀಯ ವ್ಯವಹಾರ,… pic.twitter.com/atWY4pZ6mC
— Vijayendra Yediyurappa (@BYVijayendra) February 9, 2024