ವಿಜಯಪುರ | ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ ಅವಶ್ಯಕ: ಬಸವರಾಜ ಬೆಣ್ಣೆ

Date:

Advertisements

ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳು ಮತ್ತು ಮೌಲ್ಯಗಳ ಜ್ಞಾನದ ಅವಶ್ಯಕತೆಯಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಸವರಾಜ ಬೆಣ್ಣೆ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗ ಮತ್ತು ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ” ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಮಾತನಾಡಿ, “ಕೌಶ್ಯಲ್ಯ ಅಭಿವೃದ್ಧಿಯ ಮಹತ್ವ, ಇದರ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ರೂಢಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

Advertisements

ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್ ಎಂ ಚಂದ್ರಶೇಖರ ಮಾತನಾಡಿ, “ವಿದ್ಯಾರ್ಥಿನಿಯರ ಭವಿಷ್ಯದ ಪ್ರಗತಿಯಲ್ಲಿ ಕೌಶ್ಯಲ್ಯ ಬಹಳ ಮುಖ್ಯ” ಎಂದು ತಿಳಿಸಿದರು.

ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಆರ್ ವಿ ಗಂಗಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಹಿಳಾ ವಿವಿಯ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಮಲ್ಲಿಕಾರ್ಜುನ ಎನ್ ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪಟ್ಟಣ ಪಂಚಾಯಿತಿ ಸದಸ್ಯರ ಸಾಮಾನ್ಯ ಸಭೆ; ಶಾಸಕರೆದುರು ಮನವಿ ಇಟ್ಟ ಸದಸ್ಯರು

ಪ್ರಾದೇಶಿಕ ಕೇಂದ್ರ ಬೀದರ್‌ನ ನಿರ್ದೇಶಕ ಪ್ರೊ. ಡಿ ಎಂ ಮದಕರಿ, ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ ಕೆ ಪಿ, ವಿಭಾಗದ ಪ್ರಾಧ್ಯಾಪಕಿ ಪ್ರೊ.ಅನಿತಾ ನಾಟಿಕರ್, ಡಾ.ಸಿ ಎಂ ಮಠಪತಿ, ಡಾ. ಗಣೇಶ ಎಸ್ ಆರ್, ವಿವಿಧ ವಿಭಾಗದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X