ಉಡುಪಿ | ಹೆಣ್ಣಿನ ಭಾವನೆಯ ಸುತ್ತ ʼರವಿಕೆ ಪ್ರಸಂಗʼ; ಫೆ.16ಕ್ಕೆ ರಾಜ್ಯಾದ್ಯಂತ ಬಿಡುಗಡೆ

Date:

Advertisements

ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು,
ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು ಎಂದು ರವಿಕೆ ಪ್ರಸಂಗ ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಹೇಳಿದರು.

ಉಡುಪಿಯಲ್ಲಿ ನಡೆದ ಪತಿಕಾಗೋಷ್ಟಿಯಲ್ಲಿ ʼರವಿಕೆ ಪ್ರಸಂಗʼ ಸಿನಿಮಾದ ಕುರಿತು ಮಾತನಾಡಿ, “ಸಾಮಾನ್ಯವಾಗಿ ರವಿಕೆ ಅಂದಾಕ್ಷಣ ಅದರ ಬಗ್ಗೆ ಗಂಭೀರ ಚಿಂತನೆಗಿಂತ ಹತ್ತು ಹಲವು ಹಾಸ್ಯಾಸ್ಪದ ಭಾವನೆ ಬಹುತೇಕರಲ್ಲಿ ಸಹಜವಾಗಿ ಮೂಡುತ್ತದೆ. ಆದರೆ ಆ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಿ, ಸಮಾಜದಲ್ಲಿ ಅದೆಷ್ಟೋ ಇಂತಹ ಸಂದಿಗ್ಧ ಸ್ಥಿತಿಯಲ್ಲಿರುವ ಹಾಗೂ ಇಂತಹ ಸ್ಥಿತಿಯನ್ನು ಅನುಭವಿಸಿರುವ ಮಹಿಳೆಯರ ಭಾವನೆಗೆ ಈ ಸಿನಿಮಾ ಮೂಲಕ ಬಣ್ಣ ತುಂಬಬೇಕು ಎನ್ನುವ ಹಂಬಲದಿಂದ ರವಿಕೆ ಪ್ರಸಂಗ ಸಿನಿಮಾ ಮಾಡಲಾಗಿದೆ. ಜನರು ಖಂಡಿತಾ ಸಿನಿಮಾ ಮೆಚ್ಚುತ್ತಾರೆಂಬ ವಿಶ್ವಾಸವಿದೆ” ಎಂದು ಹೇಳಿದರು.

“ಮದ್ಯಮ ವರ್ಗದ ಕುಟುಂಬವೊಂದು ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಷವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೇ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನೂ ಕೂಡ ರವಿಕೆ ಪಸಂಗದಲ್ಲಿ ಸೂಕ್ಷ್ಮವಾಗಿ ತೋರಿಸಲಾಗಿದೆ. ಒಬ್ಬ ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ” ಎಂದರು.

Advertisements

ಚಿತ್ರದ ನಾಯಕಿ ಗೀತಾ ಭಾರತಿ ಭಟ್ ಮಾತನಾಡಿ, “ಈ ಚಿತ್ರದ ಕಥೆ ದಕ್ಷಿಣ ಕನ್ನಡದ ಒಂದು ಹಳ್ಳಿಯಲ್ಲಿ ನಡೆಯುತ್ತದೆ. ಈ ಹಳ್ಳಿಯಲ್ಲಿ ಚಿತ್ರದ ನಾಯಕಿ ‘ಸಾನ್ವಿ’ ಅವಳ ಚಿಕ್ಕ ಕುಟುಂಬದ ಜೊತೆಗೆ ಇರುತ್ತಾಳೆ. ಅವಳು 28 ವರ್ಷ ವಯಸ್ಸಿನ ಹುಡುಗಿಯಾಗಿದ್ದು, ಈಗಾಗಲೇ ಅವಳಿಗೆ ಸಾಕಷ್ಟು ಮದುವೆ ಸಂಬಂಧಗಳು ಬಂದಿದ್ದರೂ ಯಾವುದೇ ಸಂಬಂಧಗಳು ಅವಳಿಗೆ ಸರಿಯಾಗಿರುವುದಿಲ್ಲ. ಸಾನ್ವಿ ಮದುವೆಯಾಗಲು ಒಬ್ಬ ಸುಂದರವಾದ ಹುಡುಗನನ್ನು ಹುಡುಕುತ್ತಿರುತ್ತಾಳೆ. ಅವಳ ಮನೆಯವರೂ ಕೂಡ ಅವಳಿಗೆ ಬೇಗ ಮದುವೆ ಮಾಡಬೇಕೆಂಬ ಯೋಚನೆಯಲ್ಲಿರುತ್ತಾರೆ. ಎಷ್ಟೋ ಸಂಬಂಧಗಳಿಂದ ತಿರಸ್ಕರಿಸಲ್ಪಟ್ಟ ಸಾನ್ವಿಗೆ ಈ ಬಾರಿ ಒಂದು ಫಾರಿನ್ ಪ್ರಪೋಸಲ್ ಬರುತ್ತದೆ. ಈ ವೇಳೆ ರವಿಕೆ ಹೊಲಿಯಲು ಕೊಡುವಲ್ಲಿಂದ ಸಿನಿಮಾ ಆರಂಭಗೊಂಡು ಕೋರ್ಟ್ ಮೆಟ್ಟಿಲು ಹತ್ತುತ್ತದೆ. ಕೊನೆಗೆ ಒಳ್ಳೆಯ ಸಂದೇಶದೊಂದಿಗೆ ಸಿನಿಮಾ ಮುಕ್ತಾಯವಾಗುತ್ತದೆ” ಎಂದು ಹೇಳಿದರು.

ರಘು ಪಾಂಡೇಶ್ವರ ಮಾತನಾಡಿ, “ರವಿಕೆ ಪ್ರಸಂಗ ಸಿನಿಮಾ ಜನಸಾಮಾನ್ಯರಿಗೆ ಹತ್ತಿರವಾಗುವ ಸಿನಿಮಾ. ಇದರಲ್ಲಿ ನಟಿಸುವಾಗ ತುಂಬಾನೇ ಎಂಜಾಯ್ ಮಾಡಿದ್ದೇವೆ. ಒಂದೊಳ್ಳೆ ವಿಷಯ ಇಟ್ಟುಕೊಂಡು ಸಿನಿಮಾ ಮಾಡಿದ್ದು, ಪ್ರೀಮಿಯರ್ ಶೋ ವೀಕ್ಷಿಸಿದ ಜನರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದು ನಮಗೆ ಹೆಚ್ಚಿನ ಬಲ ತುಂಬಿದ್ದು ಸಿನಿಮಾ ಪ್ರೇಮಿಗಳಿಗೆ ಖಂಡಿತ ನಿರಾಸೆ ಹುಟ್ಟಿಸುವುದಿಲ್ಲ. ಎಲ್ಲರೂ ಫೆಬ್ರವರಿ 16ರಂದು ಸಿನಿಮಾ ಮಂದಿರಕ್ಕೆ ಹೋಗಿ ಸಿನಿಮಾ ನೋಡಿ ನಮ್ಮನ್ನು ಪ್ರೋತ್ಸಾಹಿಸಿ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ

ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದಿರುವ ಪಾವನಾ ಸಂತೋಷ್ ಮಾತಾಡಿ, “ಎಲ್ಲ ವರ್ಗದ ಜನರನ್ನು ಮುಟ್ಟುವಂತಹ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ, ಕುಟುಂಬ ಸಮೇತರಾಗಿ ವೀಕ್ಷಿಸಬಲ್ಲ ಒಂದೊಳ್ಳೆ ಮೆಸೇಜ್ ಇರುವ ಸಿನಿಮಾ” ಎಂದರು.

ಚಿತ್ರದ ತಾರಾಂಗಣದಲ್ಲಿ ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಹನುಮಂತೇ ಗೌಡ, ಖುಷಿ ಆಚಾರ್, ಹನುಮಂತ್ ರಾವ್ ಕೆ ಇರಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X