ಪ್ರಧಾನಿ ಮೋದಿಯ ಆಡಳಿತ ‘ಅಮೃತ ಕಾಲ’ವಲ್ಲ; ವಿನಾಶ ಕಾಲ: ಸಿದ್ದರಾಮಯ್ಯ ಟೀಕೆ

Date:

Advertisements

ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ʼವಿನಾಶ ಕಾಲʼ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಈ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಈ ದೇಶದ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಕೂಡ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿ ಮೋದಿಯವರು ಚುನಾವಣೆಯಲ್ಲಿ ಗೆದ್ದಿದ್ದರು. ಗೆದ್ದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಮರೆತು ದೇವರು-ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿ ಹೋಗಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

“ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೋ? ಅನ್ಯಾಯದ ಕಾಲದಲ್ಲಿ ಇದೆಯೋ? ಎಂದು ಜನರೇ ತೀರ್ಮಾನಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X