ವಿಜಯಪುರ | ಸಾಲ ಮರುಪಾವತಿಸುವಂತೆ ಕಿರುಕುಳ; ಯುವಕ ಆತ್ಮಹತ್ಯೆಗೆ ಯತ್ನ

Date:

ತನ್ನ ಪೋಷಕರು ಮಾಡಿದ್ದ ಸಾಲ ಮರುಪಾವತಿ ಮಾಡುವಂತೆ ತನಗೆ ಸಾಲದಾತರು ನೀಡಿದ್ದ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಜಯಪುರದ ಶಾಪೇಟೆಯಲ್ಲಿ ಯುವಕ ಶಾರುಖ್ ಸೌದಾಗರ್ ವಿಷ ಸೇವಿಸಿ ಆತ್ಮಹತ್ಯೆಗೆ ಹತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾನಿದ್ದಾನೆ.

ಶಾರುಖ್ ತಂದೆ ಮೆಹಬೂಬಸಾಬ್ ಅವರು ಮಹಿಳೆಯೊಬ್ಬರ ಬಳಿ ಸಾಲ ಪಡೆದಿದ್ದರು. ಪಡೆದಿದ್ದ ಸಾಲದ ಮೊತ್ತವನ್ನು ಹಿಂದಿರುಗಿಸಿರಲಿಲ್ಲ ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾಲದ ಹಣವನ್ನು ಮರುಪಾವತಿಸುವಂತೆ ಮಹಿಳೆ ಮೆಹಬೂಬಸಾಬ್ ಅವರನ್ನು ಕೇಳದೆ, ಶಾರೂಕ್‌ ಅವರನ್ನು ಕೇಳುತ್ತಿದ್ದರು. ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಸಾಲ ಮರುಪಾವತಿಗೆ ಮಹೀಲೆ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ಬೇಸತ್ತ ಶಾರೂಕ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಸದ್ಯ, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...