ಬೆಂಗಳೂರು | ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ : ಬಿಬಿಎಂಪಿ

Date:

Advertisements
  • ಮೇ ಅಂತ್ಯದಿಂದ ತಂಬಾಕು ಮಾರಾಟಕ್ಕೆ ಪರವಾನಗಿ ನೀಡಲು ಆರಂಭ
  • ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ ₹500 ಇದೆ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ತಂಬಾಕು ಮಾರಾಟಕ್ಕೆ ಮಾರಾಟಗಾರರು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು ಎಂದು ಬಿಬಿಎಂಪಿ ಹೇಳಿದೆ.

ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಣಕ್ಕೆ ತರಲು ಹೊಸದಾಗಿ ಅಧಿಸೂಚಿತ ನಿಯಮ ಜಾರಿಗೆ ತರಲು ನಿರ್ಧರಿಸಿದೆ. ಮೇ ಅಂತ್ಯದಿಂದ ಪರವಾನಗಿ ನೀಡಲು ಆರಂಭಿಸಲಾಗುವುದು. ಪರವಾನಗಿ ಪಡೆಯದೇ ತಂಬಾಕು ಮಾರಾಟ ಮಾಡುವವರಿಗೆ ದಂಡ ವಿಧಿಸುವುದು ಅಥವಾ ಅಂಗಡಿ ಮುಚ್ಚುವುದು ಸೇರಿದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ.ತ್ರಿಲೋಕಚಂದ್ರ ತಿಳಿಸಿದರು.

“ತಂಬಾಕು ಮಾರಾಟ ಮಾಡುವ ಮಾರಾಟಗಾರರು ತಮ್ಮ ಅಂಗಡಿಗಳಲ್ಲಿ ಬಿಬಿಎಂಪಿಯಿಂದ ಪಡೆದ ಪರವಾನಗಿಯನ್ನು ಎಲ್ಲರಿಗೂ ಕಾಣುವಂತೆ ಅಂಗಡಿ ಮುಂಭಾಗದಲ್ಲಿ ಹಾಕಬೇಕು. ಅಂಗಡಿಯ ಸುತ್ತಲೂ ಹಾಗೂ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡಬಾರದು. ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ ₹500 ಇದ್ದು, ನಿಯಮ ಉಲ್ಲಂಘಿಸಿದವರಿಗೆ ₹5,000 ಮತ್ತು ನಿಯಮ ಉಲ್ಲಂಘನೆ ನಿರಂತರವಾದರೇ ದಿನಕ್ಕೆ ₹100 ದಂಡ ವಿಧಿಸಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

ತಂಬಾಕು ಪರವಾನಗಿಯು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್‌ಗಳ ಭಾಗವಾಗಿದೆ. ಈ ವರ್ಷದ ಆರಂಭದಲ್ಲಿ ಎಲ್ಲ ಪುರಸಭೆಯ ಸಂಸ್ಥೆಗಳು ಇದನ್ನು ಜಾರಿಗೆ ತರಲು ನಿರ್ಧರಿಸಿವೆ. ಮೇ ಅಂತ್ಯದಿಂದ ಇದು ಅನುಷ್ಠಾನಗೊಳ್ಳುತ್ತದೆ. ಈ ಮಧ್ಯೆ, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನವನ್ನು ತಡೆಗಟ್ಟಲು ಬಿಬಿಎಂಪಿ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿದೆ. ಕಾರ್ಯಪಡೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X