ಫೆಬ್ರವರಿ 27 ರಂದು ನಡೆಯುವ 56 ರಾಜ್ಯಸಭಾ ಸ್ಥಾನಗಳಿಗೆ ಕರ್ನಾಟಕದ ಒಬ್ಬರು ಸೇರಿ 14 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.
ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಹಿರಿಯ ನಾಯಕ, ಕಟ್ಟಾ ಹಿಂದುತ್ವವಾದಿ ನಾರಾಯಣಸಾ ಭಾಂಡಗೆ ಆಯ್ಕೆಯಾಗಿದ್ದಾರೆ.
ರಾಜ್ಯ, ಬಾಗಲಕೋಟೆ ಜಿಲ್ಲೆಯ ಮಟ್ಟಿಗೆ ಇದು ಅಚ್ಚರಿಯ ಬೆಳವಣಿಗೆಯಾಗಿದೆ. ಸಂಘ ಪರಿವಾರ, ಹಿಂದುತ್ವದ ಅಡಿಯಲ್ಲಿ ಮೂರು ದಶಕಗಳಿಂದ ಹೋರಾಟ ಮಾಡಿದ್ದರು. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ