ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಭಾನುವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ “ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಾಗಿದೆ. ಪೂಜೆ ಮಾಡಲು ಕಳೆದ ವರ್ಷ ಕೋರ್ಟ್ ಅನುಮತಿ ನೀಡಿದೆ. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ಮಾಡೋದು ನಮ್ಮ ಕರ್ತವ್ಯ, ಅದರ ಮುಂದುವರೆದ ಭಾಗವಾಗಿ ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ
“ರಾಘವ ಚೈತನ್ಯ ಅವರು ಈಶ್ವರಲಿಂಗ ಪ್ರತಿಷ್ಠಾಪನೆ ಮಾಡಿದ ಸ್ಥಳ ಅದು. ಅದನ್ನು ಕೆಲವರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈಗ ದರ್ಗಾ ಮಾಡಿ ಉರುಸ್ ಮಾಡುತ್ತಿದ್ದಾರೆ. ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರದಲ್ಲಿ ಪೂಜೆ ಮಾಡುವುದು ನಮ್ಮ ಹಕ್ಕು. ಶಿವರಾತ್ರಿ ದಿನ ಆ ಸ್ಥಳಕ್ಕೆ ಲಕ್ಷಾಂತರ ಜನ ಬಂದು ಪೂಜೆ ನೆರೆವೇರಿಸುತ್ತೇವೆ. ನಮಗೆ ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಸರ್ಕಾರ ಅದರ ಕರ್ತವ್ಯ ನಿರ್ವಹಿಸಲಿ, ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ” ಎಂದರು.