ಮಾತು ಮತ್ತು ಕೃತಿಗಳಲ್ಲಿ ಕಾಂಗ್ರೆಸ್ ಸದಾ ಒಂದು, ಬಿಜೆಪಿ ಇದಕ್ಕೆ ತದ್ವಿರುದ್ಧ: ಎಂ ಬಿ ಪಾಟೀಲ್‌ ಕಿಡಿ

Date:

Advertisements

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಹೀಗೆ ಖಾರವಾಗಿ ಪ್ರತಿಕ್ರಿಯಿಸಿದರು.

“ಕಾಂಗ್ರೆಸ್ ಪಕ್ಷವು ಮಾತು ಮತ್ತು ಕೃತಿಗಳಲ್ಲಿ ಸದಾ ಒಂದಾಗಿದೆ. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ. ತಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನೆಲ್ಲ ವಾಪಸ್ ತಂದು ಒಬ್ಬೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆಂದರು; ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತುಗಳನ್ನಾಡಿದರು; ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಬಂದರು. ಆದರೆ, ಈ ಭರವಸೆಗಳ ಗತಿ ಏನಾಯಿತು?” ಎಂದು ಅವರು ಸವಾಲೆಸೆದರು.

Advertisements

“ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ, ಕೇಂದ್ರದ ಬಿಜೆಪಿ ಸರಕಾರವು ಇಲ್ಲಿಯವರೆಗೂ ನಮಗೆ ಎನ್.ಡಿ.ಆರ್.ಎಫ್ ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಜೊತೆಗೆ ಈ ಪರಿಹಾರ ಹಣದ ಪ್ರಮಾಣವನ್ನು ಶೇ.10ರಷ್ಟು ಹೆಚ್ಚಿಸುವಂತೆ ಕೇಳಿಕೊಂಡೆವು. ಅದಕ್ಕೂ ಬಿಜೆಪಿ ಕಿವುಡಾಗಿದೆ. ಇನ್ನೊಂದೆಡೆಯಲ್ಲಿ ನಾವು ನಮ್ಮ ರೈತರಿಗೆ ಎಕರೆಗೆ 2,000 ರೂ.ಗಳಂತೆ ಪರಿಹಾರ ಕೊಟ್ಟಿದ್ದೇವೆ” ಎಂದರು.

“ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡು ಸದನದೊಳಕ್ಕೆ ಬಂದು, ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಬರೀ ಜೈ ಶ್ರೀರಾಮ್ ಎನ್ನುತ್ತಾರೆ. ನಾವು ರಾಮನ ಜೊತೆಗೆ ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ಎಲ್ಲರಿಗೂ ಜೈಕಾರ ಹಾಕುತ್ತೇವೆ. ನಮ್ಮ ಮನೆಗಳಲ್ಲಿ, ಲಿಂಗಾಯತ ಮಠಗಳಲ್ಲಿ ಮೊದಲಿನಿಂದಲೂ ಕೇಸರಿ ವಸ್ತ್ರದ ಉಪಯೋಗವಿದೆ. ಕೇಸರಿ ಶಾಲೇನೂ ಬಿಜೆಪಿಯ ಸ್ವತ್ತಲ್ಲ” ಎಂದು ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X