ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದ ಲೋಕಸಭೆ ಸದಸ್ಯರಾಗಿದ್ದಾರೆ.
ಬಿಹಾರದಿಂದ ಅಖಿಲೇಶ್ ಸಿಂಗ್ ಪ್ರಸಾದ್, ಅಭಿಷೇಕ್ ಮನು ಸಿಂಗ್ವಿ ಹಾಗೂ ಅಜಯ್ ಮಕಾನ್ ಅಭ್ಯರ್ಥಿಗಳಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ಮುಂದಿನ ಎರಡು ದಿನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು
ಫೆ.27ರಂದು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಿದ್ದು, ಫೆ.15ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಮಧ್ಯಪ್ರದೇಶ,ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದ ಕಾಂಗ್ರೆಸ್ ನಾಯಕರು ಕೂಡ ತಮ್ಮ ರಾಜ್ಯದಿಂದ ಸ್ಪರ್ಧಿಸಬೇಕೆಂದು ಸೋನಿಯಾ ಗಾಂಧಿಯವರನ್ನು ಮನವಿ ಮಾಡಿದ್ದಾರೆ.