ಸುಡಾನ್‌ | ಸೇನೆ – ಅರೆಸೇನೆ ನಡುವೆ ಘರ್ಷಣೆ; ಮನೆಯೊಳಗೆ ಇರುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

Date:

Advertisements
  • ಮಿಲಿಟರಿ ನಾಯಕ ಬುರ್ಹಾನ್ ಹಾಗೂ ರಾಜಧಾನಿಯ ವಿಮಾನ ನಿಲ್ದಾಣದ ಬಳಿ ಗುಂಡಿನ ದಾಳಿ
  • ಸೇನೆ ನಾಯಕ ಮತ್ತು ಅರೆಸೇನಾ ಪಡೆಯ ಕಮಾಂಡರ್ ನಡುವೆ ಉಂಟಾಗಿದ್ದ ಉದ್ವಿಗ್ನತೆ

ಸುಡಾನ್ ದೇಶದಲ್ಲಿ ಸೇನೆ ಹಾಗೂ ಅರೆಸೇನೆ ನಡುವೆ ಘರ್ಷಣೆ ಉಂಟಾಗಿರುವ ಕಾರಣ ಎಲ್ಲಾ ಭಾರತೀಯರು ಮನೆಯಿಂದ ಹೊರಗೆ ಬರದಂತೆ ಹಾಗೂ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ.

ಸುಡಾನ್‌ನಲ್ಲಿ ಅರೆಸೇನಾ ಪಡೆ ಮತ್ತು ನಿಯಮಿತ ಸೇನೆಯು ಪರಸ್ಪರರ ನೆಲೆಗಳ ಮೇಲೆ ದಾಳಿ ಮಾಡಲಾಗಿದೆ. ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ ಅನೇಕ ಸ್ಫೋಟಗಳು ಮತ್ತು ಗುಂಡಿನ ದಾಳಿ ನಡೆಯುತ್ತಿರುವ ಕಾರಣ ಸುರಕ್ಷಿತವಾಗಿ ಆಶ್ರಯ ಪಡೆಯಲು ಭಾರತೀಯರಿಗೆ ತಿಳಿಸಲಾಗಿದೆ.

“ವರದಿಯಾಗಿರುವ ಸ್ಫೋಟಗಳು ಮತ್ತು ಘರ್ಷಣೆಗಳ ಕಾರಣದಿಂದ, ಎಲ್ಲಾ ಭಾರತೀಯರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಮನೆಯೊಳಗೆ ಇರಲು ಮತ್ತು ತಕ್ಷಣದ ಪರಿಣಾಮದೊಂದಿಗೆ ಹೊರಗೆ ಹೋಗುವ ಸಾಹಸ ಮಾಡುವುದನ್ನು ನಿಲ್ಲಿಸಲು ಸಲಹೆ ನೀಡಲಾಗುತ್ತದೆ. ದಯವಿಟ್ಟು ಶಾಂತವಾಗಿರಿ ಮತ್ತು ಹೆಚ್ಚಿನ ಮಾಹಿತಿ ನಿರೀಕ್ಷಿಸಿ” ಎಂದು ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

Advertisements

ಸುಡಾನ್ ಸೇನೆಯ ನಾಯಕ ಅಬ್ದೆಲ್ ಫತ್ತಾಹ್ ಅಲ್-ಬುರ್ಹಾನ್ ಮತ್ತು ಅರೆಸೇನಾ ಪಡೆಯ ಕಮಾಂಡರ್ ಮೊಹಮ್ಮದ್ ಹಮ್ದಾನ್ ಡಾಗ್ಲೋ ನಡುವೆ ಕೆಲವು ವಾರಗಳ ಹಿಂದೆ ಭಾರಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಆದರೆ ಇದೀಗ ಈ ಉದ್ವಿಗ್ನ ಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ.

ಈ ಘರ್ಷಣೆಯಿಂದ ರಾಜಧಾನಿಯಲ್ಲಿ ಅನೇಕ ಸ್ಫೋಟಗಳು ಮತ್ತು ದಕ್ಷಿಣ ಖಾರ್ಟೂಮ್‌ನ ಆರ್‌ಎಸ್‌ಎಫ್ ಸಮುಚ್ಛಯದ ಬಳಿ ಗುಂಡಿನ ದಾಳಿಗಳು ವರದಿಯಾಗಿದೆ. ಸುಡಾನ್ ವಿಮಾನ ನಿಲ್ದಾಣದ ಕಾಂಪೌಂಡ್‌ಗೆ ಟ್ರಕ್‌ಲೋಡ್‌ಗಳ ಫೈಟರ್‌ಗಳು ದಾಳಿ ಮಾಡುತ್ತಿದೆ. ಇದೀಗ ತನ್ನ ಒಂದು ಸೇನೆ ಪಡೆ ಖಾರ್ಟೂಮ್‌ ವಿಮಾನ ನಿಲ್ದಾಣವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಆರ್‌ಎಸ್‌ಎಫ್ ಹೇಳಿದೆ.

ಖಾರ್ಟೂಮ್‌ನ ವಿಮಾನ ನಿಲ್ದಾಣ ಹಾಗೂ ಬುರ್ಹಾನ್ ನಿವಾಸದ ಬಳಿ ಗುಂಡಿನ ದಾಳಿ ನಡೆಯುತ್ತಿದೆ. ಒಂದು ಕಡೆ ಗುಂಡಿನ ದಾಳಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ನಾಗರಿಕರ ರಕ್ಷಣೆ ಕಾರ್ಯ ನಡೆಯುತ್ತಿದೆ. ಕ್ಷಿಪ್ರ ಬೆಂಬಲ ಪಡೆಗಳ ಯೋಧರು ಖಾರ್ಟೂಮ್‌ ಮತ್ತು ಸುಡಾನ್ ಸುತ್ತಮುತ್ತಲಿನ ಹಲವಾರು ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ. ಸುಡಾನ್‌ನಲ್ಲಿ ಘರ್ಷಣೆಗಳು ನಡೆಯುತ್ತಿದ್ದರೂ ಮತ್ತು ದೇಶವನ್ನು ರಕ್ಷಿಸಲು ಸೇನೆಯು ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದೆ” ಎಂದು ಸೇನಾ ವಕ್ತಾರ ಬ್ರಿಗೇಡಿಯರ್ ಜನರಲ್ ನಬಿಲ್ ಅಬ್ದಲ್ಲಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X