ಡೆತ್ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡುಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹೀರೇಹಾಳ ಗ್ರಾಮದಲ್ಲಿ ನಡೆದಿದೆ.
ತಮ್ಮ ಸಾವಿಗೆ ಮರುಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಎಂಬಾತನೇ ಕಾರಣವೆಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ. ತಮ್ಮ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
“ಎಲ್ಲ ಲೆಕ್ಕ ಕೊಟ್ಟರೂ ಶರಣಗೌಡ ಪಾಟೀಲ್ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಆತನಿಗೆ ಕಠಿಣ ಶಿಕ್ಷೆ ಕೊಡಬೇಕು” ಎಂದು ಪತ್ರದಲ್ಲಿ ಬರೆದಿದ್ದಾರೆ.
ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.