ಪ್ರಸ್ತುತ ವರ್ಷದ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಕರ್ನಾಟಕ ರಣಧೀರ ಪಡೆ ವಿಜಯಪುರ ತಾಲೂಕು ಅಧ್ಯಕ್ಷ ರಾಖೇಶ್ ಕುಮಟಗಿ ಒತ್ತಾಯಿಸಿದರು.
ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಜಿಲ್ಲೆಯಲ್ಲಿ ಸಾಕಷ್ಟು ಕಡುಬಡವ ಕುಟುಂಬದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಅಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಅವರಿಗೆ ಉತ್ತಮ ಉಚಿತ ಶಿಕ್ಷಣಕ್ಕಾಗಿ ಸರ್ಕಾರಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕಾಲೇಜು ತೆರೆದು ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಶಾಲೆಯಲ್ಲಿ ಶಾಸಕರ ಗೂಂಡಾಗಿರಿ; ಡಿವೈಎಫ್‌ಐ ಖಂಡನೆ
ಹಣವಂತರ ಮಕ್ಕಳು ಖಾಸಗಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಪಡೆದುಕೊಳ್ಳುತ್ತಾರೆ. ಆದರೆ ಬಡ ವಿದ್ಯಾರ್ಥಿಗಳಿಗೆ ಹಾಗಾಗುವುದಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದರಿಂದ ಉನ್ನತ ಶಿಕ್ಷಣ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಲಿ ಇರುವ ಜಾಗದಲ್ಲಿ ಕಾಲೇಜು ನಿರ್ಮಾಣ ಮಾಡಲು ಅನುಕೂಲವಾಗುತ್ತದೆ. ಈ ಬಾರಿ ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಗೆ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಗಂಭೀರವಾಗಿ ಪರಿಗಣಿಸಿಬೇಕು” ಎಂದು ಒತ್ತಾಯಿಸಿದರು.