ಕಲಬುರಗಿ | ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿ ಸಂಸದರ ಕಚೇರಿ ಎದುರು ಸಿಪಿಐ ಪ್ರತಿಭಟನೆ

Date:

Advertisements

ಕೇಂದ್ರ ಸರ್ಕಾರ ಅನುದಾನ, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಸೋಮವಾರ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಸದರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, “ಜಿಎಸ್‍ಟಿ, ತೆರಿಗೆ ಹಣ, ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿ ಖಂಡನೀಯ” ಎಂದು ಆಕ್ಷೇಪಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಂವಿಧಾನದ ಆಶಯದಂತೆ ದೇಶದ ಜನತೆಯ ಪರವಾಗಿ ಆಡಳಿತ ನಡೆಸಬೇಕು. ದೇಶ ಮುನ್ನಡೆಸಲು ಹಾಗೂ ರಾಜ್ಯಗಳನ್ನು ಸರ್ವ ವ್ಯಾಪಿಯಾಗಿ ಸಬಲಗೊಳಿಸಲು ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗಿರುವ ಎಲ್ಲ ರೂಪದ ತೆರಿಗೆ ಹಣವನ್ನು ರಾಜ್ಯಗಳಿಗೆ ಹಂಚಿಕೆಯಾಗಬೇಕು ಎಂದು ಹಣಕಾಸು ಆಯೋಗವನ್ನು ರಚಿಸಲಾಗಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯ ಸಮ್ಮತವಾಗಿ ರಾಜ್ಯಗಳಿಗೆ ಹಂಚಿಕೆ ಮಾಡಿ ಅಗತ್ಯವಾದ ಅನುದಾನವನ್ನು ಕಾಲಕಾಲಕ್ಕೆ ಬಿಡುಗಡೆಗೊಳಿಸುವುದು ಭಾರತ ಸರ್ಕಾರದ ಹೊಣೆಯಾಗಿದೆ” ಎಂದು ಹೇಳಿದರು.

Advertisements

ಕಳೆದ ನಾಲ್ಕು ವರ್ಷಗಳಿಂದ ರಾಜ್ಯಗಳಿಗೆ ಲಭಿಸಬೇಕಾದ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದು, ಸುಮಾರು 45 ಸಾವಿರ ಕೋಟಿ ರೂ.ಗಳು ನಷ್ಟವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಇದರೊಂದಿಗೆ ಬರ ಪರಿಹಾರ ಅನುದಾನವನ್ನೂ ಸಹ ಬಿಡುಗಡೆಗೊಳಿಸದೇ ಇರುವುದು ರಾಜ್ಯಕ್ಕೆ ಮಾಡಿದ ಮಹಾ ಅನ್ಯಾಯವಾಗಿದೆ” ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪಾಲಿನ ಹಣ ಸೇರಿದಂತೆ ನೆಲ, ಜಲ, ಭಾಷೆಯಂತಹ ರಾಜ್ಯದ ಅಸ್ಮಿತೆಯ ಪ್ರಶ್ನೆಗಳು ಎದುರಾದಾಗ ರಾಜ್ಯದ ಪರ ಧ್ವನಿ ಎತ್ತದೇ ಮೌನ ತಾಳಿರುವುದು ಸರಿಯಲ್ಲ. ಕೂಡಲೇ ಕೇಂದ್ರ ಸರ್ಕಾರದಿಂದ ಬಿಡುಗಡೆಗೊಳಿಸಿರುವ ನಿಧಿ ಅಥವಾ ಅನುದಾನ ಎಷ್ಟು ಕ್ಷೇತ್ರಗಳಿಗೆ ಸಂಸದರ ನಿಧಿಯಿಂದ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಶ್ವೇತಪತ್ರ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಸಿಪಿಐ ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ್ ರಾಠೋಡ್, ಸಹ ಕಾರ್ಯದರ್ಶಿ ಪದ್ಮಾವತಿ ಎನ್. ಮಾಲಿಪಾಟೀಲ್, ಭೀಮಾಶಂಕರ್ ಮಾಡಿಯಾಳ್, ಪ್ರಭುದೇವ್ ಯಳಸಂಗಿ, ಎಚ್.ಎಸ್. ಪತಕಿ, ಶಿವಲಿಂಗಮ್ಮಾ ಲೆಂಗಟಿಕರ್, ಶಾಣಮ್ಮಾ ಎ.ಪೂಜಾರಿ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X