ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಬಿಜೆಪಿ ಸೇರಿದ ಅಶೋಕ್ ಚವಾಣ್

Date:

Advertisements

ಕಾಂಗ್ರೆಸ್ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಿದ್ದಾರೆ.

ಬಿಜೆಪಿ ಸೇರ್ಪಡೆಯ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವನ್ಕುಲ್ ಸ್ವಾಗತಿಸಿದರು.

ಸಾರ್ವತ್ರಿಕ ಚುನಾವಣೆಗೂ ಮುನ್ನವೇ ಅಶೋಕ್ ಚವಾಣ್ ಕಾಂಗ್ರೆಸ್​ ತೊರೆದಿರುವುದು ಪಕ್ಷದ ಕಾರ್ಯಕರ್ತರಿಗೆ ಆಘಾತ ನೀಡಿದೆ. ಅಶೋಕ್ ಚವಾಣ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸೇರ್ಪಡೆಯ ಬೆನ್ನಲ್ಲೇ ರಾಜ್ಯಸಭಾ ಟಿಕೆಟ್ ಕೂಡ ಸಿಗಲಿದೆ ಎಂದು ವರದಿಯಾಗಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

Advertisements

ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಬಳಿಕ ಮಾತನಾಡಿದ್ದ ಅಶೋಕ್ ಚವಾಣ್, ಇನ್ನೆರಡು ದಿನಗಳಲ್ಲಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಇಂದು ಬೆಳಗ್ಗೆ ಬಿಜೆಪಿಯೊಂದಿಗೆ ಹೊಸ ರಾಜಕೀಯ ಪಯಣ ಆರಂಭಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಒಂದೇ ತಿಂಗಳಲ್ಲಿ ಎರಡನೇ ದೊಡ್ಡ ಹೊಡೆತವಾಗಿದೆ. ಈ ಹಿಂದೆ, ಪ್ರಮುಖ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷವನ್ನು ತೊರೆದು ಶಿವಸೇನೆಯ ಏಕನಾಥ್ ಶಿಂಧೆ ಬಣವನ್ನು ಸೇರಿದ್ದರು. ಬಾಬಾ ಸಿದ್ದಿಕ್ ಕೂಡ ತೊರೆದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಕೈ ಜೋಡಿಸಿದ್ದರು.

‘ಮುಂಬೈ ಕಾಂಗ್ರೆಸ್ ಅಧ್ಯಕ್ಷರೇ’ ಎಂದ ಚವಾಣ್: ನಗೆಗಡಲಲ್ಲಿ ತೇಲಿದ ಸಭೆ

ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತು ಆರಂಭಿಸುವ ವೇಳೆ ಮುಂಬೈ ನಗರ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಅವರನ್ನು “ಮುಂಬೈ ಕಾಂಗ್ರೆಸ್ ಅಧ್ಯಕ್ಷ” ಎಂದು ತಪ್ಪಾಗಿ ಉಲ್ಲೇಖಿಸಿದ ಪ್ರಸಂಗ ಕೂಡ ನಡೆಯಿತು.

ಅಶೋಕ್ ಚವಾಣ್ ಅವರ ಎಡವಟ್ಟು ಅರಿತ ಕೂಡಲೇ ಪಕ್ಕದಲ್ಲೇ ಕುಳಿತಿದ್ದ ಡಿಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ಎಂದು ಸರಿಪಡಿಸಲು ತಿಳಿಸಿದರು. ಈ ಬೆಳವಣಿಗೆ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ಮಾಧ್ಯಮದವರನ್ನು ಸೇರಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು. ಇದರ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X