ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾಜಾವಲಿ ಅವರು ದೊಡ್ಡಗಂಜೂರು ಶ್ರೀನಾಥ್ ಎಂಬುವವರಿಂದ ₹30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಕಾರಣ ಶ್ರೀನಾಥ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ ಹಿಯಾಳಿಸಿದ್ದರು. ಕೊನೆಗೆ ಶ್ರೀನಾಥ್ ಅವರು ಲಂಚ ನೀಡಲು ಒಪ್ಪಿಕೊಂಡಿದ್ದು, ಶ್ರೀನಾಥ್ ಅವರು ಲಂಚ ನೀಡುವಾಗ ಲೋಕಾಯುಕ್ತ ದಾಳಿ ನಡೆದಿದೆ. ಇನ್ನು ಈ ಪ್ರಕರಣದಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ಸಿದ್ದಪ್ಪ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಲಂಚ ಪಡೆಯದೇ 600 ಕೋಟಿ ರೂ. ಬಿಲ್ ಬಿಡುಗಡೆ: ಕೆಂಪಣ್ಣ
ಮಾಲಿನ್ಯ ನಿಯಂತ್ರಣ ಮಂಡಳಿಯ ಎಸ್‌ಡಿಎ ಲೋಕಯುಕ್ತ ಮಂಗಳವಾರ ಲಂಚ ಸ್ಪೀಕರಿಸುವ ವೇಳೆ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.